ಗಾಂಧಿ ಕುಟುಂಬ ಕಾಂಗ್ರೆಸ್ ನ ಆಧಾರ್ ಕಾರ್ಡು:ಶಿವಸೇನೆ ನಾಯಕ ಸಂಜಯ್ ರಾವತ್

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬ ಆಧಾರ್ ಕಾರ್ಡು ಆಗಿದ್ದು ಗಾಂಧಿ ಕುಟುಂಬದ ಹೊರತಾಗಿ ಬೇರೆ ಯಾರೂ ಕೂಡ ಪಕ್ಷವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ನಾಯಕ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಸಂಜಯ್ ರಾವತ್(ಸಂಗ್ರಹ ಚಿತ್ರ)
ಸಂಜಯ್ ರಾವತ್(ಸಂಗ್ರಹ ಚಿತ್ರ)

ಮುಂಬೈ: ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬ ಆಧಾರ್ ಕಾರ್ಡು ಆಗಿದ್ದು ಗಾಂಧಿ ಕುಟುಂಬದ ಹೊರತಾಗಿ ಬೇರೆ ಯಾರೂ ಕೂಡ ಪಕ್ಷವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ನಾಯಕ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗಾಂಧಿ ಪರಿವಾರ ಮಾತ್ರ ಕಾಂಗ್ರೆಸ್ ನ ಆಧಾರ್ ಕಾರ್ಡು, ಅದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಲ್ಲವೇ ಪ್ರಿಯಾಂಕಾ ಗಾಂಧಿ ಆಗಿರಬಹುದು. ರಾಹುಲ್ ಗಾಂಧಿಯವರು ಪಕ್ಷವನ್ನು ಚೆನ್ನಾಗಿ ಮುನ್ನಡೆಸಿಕೊಂಡು ಹೋಗಿದ್ದಾರೆ, ರಾಜಸ್ತಾನ, ಮಧ್ಯ ಪ್ರದೇಶ, ಛತ್ತೀಸ್ ಗಢ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಆದರೆ ಕಳೆದ ಲೋಕಸಭೆ ಚುನಾವಣೆ ನಂತರ ಅವರು ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದರು, ಇಂದಿಗೂ ಕೂಡ ಕಾಂಗ್ರೆಸ್ ನ್ನು ಮುನ್ನಡೆಸಲು ರಾಹುಲ್ ಗಾಂಧಿಯವರೇ ಸಮರ್ಥರು ಎಂದು ನಾನು ನಂಬುತ್ತೇನೆ ಎಂದು ರಾವತ್ ಹೇಳಿದ್ದಾರೆ.

ಕಾಂಗ್ರೆಸ್ ಬಗ್ಗೆ ಹೇಳಿಕೆ, ಪ್ರತಿಕ್ರಿಯೆಗಳನ್ನು ನಾನು ಕೊಡುವುದು ಸರಿಯಲ್ಲ, ಇದು ಅವರ ಆಂತರಿಕ ವಿಷಯ. ಆದರೆ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ನಮ್ಮ ದೇಶದಲ್ಲಿ ಸಕ್ರಿಯವಾಗಿರುವ ಪಕ್ಷವೆಂದರೆ ಅದು ಕಾಂಗ್ರೆಸ್. ಇಂದಿನ ರಾಜಕೀಯ ಸ್ಥಿತಿಗತಿಯಲ್ಲಿ ಅದು ದುರ್ಬಲವಾಗಿದ್ದರೂ ಕೂಡ ಅದು ಆಂತರಿಕ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳಬೇಕು, ಏಕೆಂದರೆ ಕಾಂಗ್ರೆಸ್ ಪಕ್ಷವೊಂದೇ ಪ್ರಮುಖ ವಿರೋಧ ಪಕ್ಷವಾಗಿರುವುದು. ಆಡಳಿತ ಪಕ್ಷಕ್ಕೆ ಒಂದು ಬಲಿಷ್ಟವಾದ ಪ್ರತಿಪಕ್ಷ ಬೇಕು. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.

ಮುಂದಿನ ನವೆಂಬರ್ ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸುವ ಸುಳಿವನ್ನು ಕೂಡ ಸಂಜಯ್ ರಾವತ್ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com