

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ನಡುವೆಯೂ ನೀಟ್ ಮತ್ತು ಜೆಇಇ ಪರೀಕ್ಷೆ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಎಲ್ಲಾ ಪಾಲುದಾರರ ಅಭಿಪ್ರಾಯ ಕೇಳಿ, ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ನೀಟ್-ಜೆಇಇ ಆಕಾಂಕ್ಷಿಗಳು ತಮ್ಮ ಆರೋಗ್ಯ ಮತ್ತು ಭವಿಷ್ಯದ ಕುರಿತು ಆತಂಕಕ್ಕೊಳಗಾಗಿದ್ದಾರೆ. ಅವರು ಕೋವಿಡ್ 19 ಸೋಂಕಿನ ಕುರಿತು ಭೀತಿಗೊಳಗಾಗಿದ್ದಾರೆ. ಸಾಂಕ್ರಾಮಿಕ ಮತ್ತು ಅಸ್ಸಾಂ ಮತ್ತು ಬಿಹಾರದ ಪ್ರವಾಹ ಪರಿಸ್ಥಿತಿಯಿಂದ ಸಾರಿಗೆ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲು ಕಷ್ಟವಾಗುತ್ತದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಎಲ್ಲಾ ಪಾಲುದಾರರ ಅಭಿಪ್ರಾಯ ಆಲಿಸಿ ಸ್ವೀಕಾರಾರ್ಹ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.