ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ: ಆಂಧ್ರ ಹಿರಿಯ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ  ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.
ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ: ಆಂಧ್ರ ಹಿರಿಯ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ
Updated on

ಕಡಪ: ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ  ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಹಿರಿಯ ನಾಯಕ, ಕಡಪ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ಎರ್ರಾಕುಂಟ್ಲಾ ಮಂಡಲದ ಚಿಲಮಕೂರು ಮೂಲದ 55 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ದೃಢವಾಗಿತ್ತು. ಅವರು ಪ್ರೊದ್ದುತೂರು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸೋಮವಾರ ಸಂಜೆ ಆಸ್ಪತ್ರೆಯ ಆವರಣದಿಂದ ಹೊರಹೋಗಲು ಪ್ರಯತ್ನಿಸಿದಾಗ, ಭದ್ರತಾ ಸಿಬ್ಬಂದಿ ಅವನನ್ನು ತಡೆದಿದ್ದರು. ಸೆಕ್ಯುರಿಟಿ ಗಾರ್ಡ್ ಮಾತಿಗೆ ಕಿವಿಗೊಡದೆಆಸ್ಪತ್ರೆಯ ಮಾಲೀಕರು ತಮ್ಮ ಸ್ನೇಹಿತರಾಗಿದ್ದಾರೆ ಮತ್ತು ಅವರೊಂದಿಗೆ ಮಾತನಾಡಲು  ಹೋಗುವುದಾಗಿ ಹೇಲಿದ ಮುಖಂಡ  ತಮ್ಮ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಸೆಕ್ಯುರಿಟಿ ಗಾರ್ಡ್‌ಗಳು ಆಸ್ಪತ್ರೆಯ ನಿರ್ವಾಹಕರಿಗೆ ಈ ಸಂಬಂಧ ಮಾಹಿತಿ ತಿಳಿಸಿದ್ದು ಮೊಬೈಲ್ ಫೋನ್ ಸಿಗ್ನಲ್‌ಗಳ ಆಧಾರದ ಮೇಲೆ ಕೋವಿಡ್ 19 ಸಕಾರಾತ್ಮಕ ರೋಗಿಗಾಗಿ ಹುಡುಕಾಟವನ್ನು ಪ್ರಾರಂಭಿಸಿದ ಪೋಲೀಸರಿಗೆ , ಮಂಗಳವಾರ ರಾತ್ರಿ ಸುನ್ನಪುರಲ್ಲಪಲ್ಲೆ ರೈಲ್ವೆ ಹಳಿಗಳ ಮೇಲೆ ಅವರ ಶವ ದೊರಕಿದೆ.

ಎರ್ರಕುಂಟ್ಲಾ  ರೈಲ್ವೆ ಸಬ್ ಇನ್ಸ್‌ಪೆಕ್ಟರ್ ವೈ ಶ್ರೀನಿವಾಸುಲು ಅವರು ಆತ್ಮಹತ್ಯೆಗೆ ಮುನ್ನ ಕಾಂಗ್ರೆಸ್ ನಾಯಕ ಬರೆದಿದ್ದ ಡೆತ್ ನೋಟ್ ವಶಕ್ಕೆ ಪಡೆದಿದ್ದಾರೆ. , ಅದರಲ್ಲಿ ಮೃತರು ಅವರ ಸಾವಿಗೆ ಯಾರೂ ಜವಾಬ್ದಾರರಾಗಿರುವುದಿಲ್ಲ ಎಂದು ಉಲ್ಲೇಖಿಸಿ ತನಗೆ ಕೋವಿಡ್ ಸೋಂಕು ಕಂಡು ಬಂದಿದ್ದು ಅದಕ್ಕಾಗಿ  ಖಿನ್ನತೆಗೆ ಒಳಗಾಗಿದ್ದೇನೆ ಮತ್ತು ಈ ಕೆಟ್ಟ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಬರೆದಿದೆ.

ನಾಯಕನ ನಿಧನಕ್ಕೆ ರಾಜ್ಯ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷ ಎನ್ ತುಳಸಿ ರೆಡ್ಡಿ ಸಂತಾಪ ಸೂಚಿಸಿದ್ದು ಕೋವಿಡ್ ಪೀಡಿತ ಜನರಿಗೆ ಭರವಸೆ ಕಳೆದುಕೊಳ್ಳದಂತೆ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯದಂತೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com