ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್

ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on: 

ನವದೆಹಲಿ: ಕೋವಿಡ್-19 ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್,  ಆರ್ ಎಸ್ ರೆಡ್ಡಿ ಮತ್ತು ಎಂ ಆರ್ ಶಾ ಅವರ ನೇತೃತ್ವದ ನ್ಯಾಯಪೀಠ ಇಂದು, ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಲು ಕೋವಿಡ್-19 ಕಾರಣವಾಗಬಾರದು, ಚುನಾವಣೆ ನಡೆಸಲು ಆಯೋಗ ಎಲ್ಲಾ ರೀತಿಯ ಎಚ್ಚರಿಕೆ, ಮುಂಜಾಗ್ರತೆ ತೆಗೆದುಕೊಳ್ಳುತ್ತದೆ, ಅಷ್ಟಕ್ಕೂ ಚುನಾವಣೆ ನಡೆಸಲು ಇನ್ನೂ ಅಧಿಸೂಚನೆಯೇ ಪ್ರಕಟವಾಗಿಲ್ಲ, ಹಾಗಾಗಿ ಈ ಅರ್ಜಿ ಆತುರದ್ದಾಗಿರುತ್ತದೆ ಎಂದು ಹೇಳಿದೆ.

ಚುನಾವಣೆ ಮುಂದೂಡುವಂತೆ ಅರ್ಜಿ ಸಲ್ಲಿಸಿದ್ದ ಅವಿನಾಶ್ ಠಾಕೂರ್, ಜನಪ್ರತಿನಿಧಿಗಳ ಕಾಯ್ದೆ ಅಡಿ ಕೋವಿಡ್-19 ಸಾಂಕ್ರಾಮಿಕ ಇರುವುದರಿಂದ ಬಿಹಾರ ವಿಧಾನಸಭೆ ಚುನಾವಣೆಯನ್ನು ಮುಂದೂಡುವಂತೆ ಮುಖ್ಯ ಚುನಾವಣಾ ಆಯುಕ್ತರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದರು.

ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿಗಳು, ಚುನಾವಣೆ ನಡೆಸಬೇಡಿ ಎಂದು ಭಾರತೀಯ ಚುನಾವಣಾ ಆಯೋಗವನ್ನು ನ್ಯಾಯಾಲಯ ಹೇಳಲು ಸಾಧ್ಯವಿಲ್ಲ, ಚುನಾವಣೆ ಮುಂದೂಡಲು ಕೋವಿಡ್-19 ಒಂದು ಬಲವಾದ ಕಾರಣವಲ್ಲ ಎಂದು ಹೇಳಿದರು.

ಈಗಿನ ಬಿಹಾರ ವಿಧಾನಸಭೆ ಅವಧಿ ನವೆಂಬರ್ 29ಕ್ಕೆ ಕೊನೆಯಾಗುತ್ತದೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇನ್ನೂ ಚುನಾವಣಾ ದಿನಾಂಕವನ್ನು ಪ್ರಕಟಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com