ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿರುವ ಘಟನೆ ಭಾನುವಾರ ನಡೆದಿದೆ.
ಹುತಾತ್ಮ ಯೋಧ  ಸುಬೇದಾರ್ ರಜ್ವೀಂದರ್ ಸಿಂಗ್
ಹುತಾತ್ಮ ಯೋಧ ಸುಬೇದಾರ್ ರಜ್ವೀಂದರ್ ಸಿಂಗ್
Updated on

ಜಮ್ಮು:ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿರುವ ಘಟನೆ ಭಾನುವಾರ ನಡೆದಿದೆ.

ಜಮ್ಮು-ಕಾಶ್ಮೀರದ ನೌಶೆರಾ ವಲಯದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಇಂದು ಶಂಕಾಸ್ಪದ ಚಲನವಲನಗಳು ಕಂಡುಬಂದವು. ತಕ್ಷಣವೇ ಗುಂಡಿನ ದಾಳಿ ಆರಂಭವಾಯಿತು. ಇದಕ್ಕೆ ಭಾರತೀಯ ಸೇನಾಪಡೆ ತಕ್ಕ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಗುಂಡೊಂದು ಕಿರಿಯ ನಿಯೋಜಿತ ಅಧಿಕಾರಿ  ನವಾಬ್ ಸುಬೇದಾರ್ ರಜ್ವೀಂದರ್ ಸಿಂಗ್ ಅವರ ಮೇಲೆ ಬಿದ್ದಿತು.

ತೀವ್ರವಾಗಿ ಗಾಯಗೊಂಡ ಅವರು ನಂತರ ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯ ಸಾರ್ಜಜನಿಕ ಸಂಪರ್ಕಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com