ಕೊರೊನಾದಿಂದ ಮೃತಪಡುವ ವೈದ್ಯರನ್ನು'ಹುತಾತ್ಮ ಯೋಧ'ರೆಂದು ಪರಿಗಣಿಸಲು ಪ್ರಧಾನಿಗೆ ಐಎಂಎ ಅಧ್ಯಕ್ಷರ ಪತ್ರ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸುವ ಭಾಗವಾಗಿ ಸೋಂಕಿಗೊಳಗಾಗಿ ಮೃತಪಡುವ ವೈದ್ಯರನ್ನು ಹುತಾತ್ಮ ಸೇನಾ ಯೋಧರಂತೆ ಪರಿಗಣಿಸಿ ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಾಜನ್ ಶರ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸುವ ಭಾಗವಾಗಿ ಸೋಂಕಿಗೊಳಗಾಗಿ  ಮೃತಪಡುವ ವೈದ್ಯರನ್ನು ಹುತಾತ್ಮ ಸೇನಾ ಯೋಧರಂತೆ ಪರಿಗಣಿಸಿ ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಾಜನ್ ಶರ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ರಾಜನ್ ಶರ್ಮ ಪ್ರಧಾನಿಗೆ ಪತ್ರ ಬರೆದಿದ್ದಾರೆ. ದೇಶದಲ್ಲಿ ಈವರೆಗೆ 87 ಸಾವಿರ ಮಂದಿ ಆರೋಗ್ಯ ಕಾರ್ಯಕರ್ತರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 573 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರದ ಅಧಿಕೃತ ಅಂಕಿ ಅಂಶಗಳನ್ನು  ಪತ್ರದಲ್ಲಿ ಪ್ರಧಾನಿ ಮಂತ್ರಿಗಳ ಗಮನ ಸೆಳೆದಿದ್ದಾರೆ.

ಈವರಗೆ 2006 ಮಂದಿ ವೈದ್ಯರು ಕೊರೊನಾ ಸೋಂಕಿಗೆ ಒಳಗಾಗಿದ್ದು, 307 ಮಂದಿ ಮೃತಪಟ್ಟಿದ್ದಾರೆ.  ಸೋಂಕಿತರಿಗೆ ಚಿಕಿತ್ಸೆ ನೀಡುವ ಕ್ರಮವಾಗಿ ವೈದ್ಯರು ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರು ಪತ್ರದಲ್ಲಿ  ವಿವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com