ಕೋವಾಕ್ಸಿನ್ ಲಸಿಕೆ: ಎರಡನೇ ಹಂತದ ಮಾನವ ಪ್ರಯೋಗಕ್ಕೆ ಸಿದ್ಧತೆ 

 ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ 'ಕೋವಾಕ್ಸಿನ್ ' ಮೇಲಿನ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋವಾಕ್ಸಿನ್
ಕೋವಾಕ್ಸಿನ್

ಭುವನೇಶ್ವರ್:  ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆ 'ಕೋವಾಕ್ಸಿನ್ ' ಮೇಲಿನ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಹಂತದ ಮಾನವ ಪ್ರಯೋಗ ಈಗಲೂ ಮುಂದುವರೆದಿದ್ದು, ಶೀಘ್ರದಲ್ಲಿಯೇ ಎರಡನೇ ಹಂತವನ್ನು ಆರಂಭಿಸಲು ಯೋಜನೆ ಹಾಕಿಕೊಂಡಿರುವುದಾಗಿ ಐಎಂಎಸ್ ಮತ್ತು ಎಸ್ ಯುಎಂ ಆಸ್ಪತ್ರೆಯ ಪ್ರಧಾನ ಅನ್ವೇಷಕ ಡಾ. ಇ. ವೆಂಕಟ ರಾವ್ ತಿಳಿಸಿದ್ದಾರೆ.

ಮೊದಲ ಹಂತದ ಮಾನವ ಪ್ರಯೋಗದಲ್ಲಿ ಯಾವುದೇ ಅಡ್ಡ ಪರಿಣಾಮ ಕಂಡುಬಂದಿಲ್ಲ ಎಂದು ತಿಳಿಸಿರುವ ಡಾ. ರಾವ್, ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಎಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಯಾಗಿದೆ ಎಂಬುದನ್ನು ದೃಢಪಡಿಸಲು ಸ್ವಯಂ ಸೇವಕರಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಾಕ್ಸಿನ್ ಮೇಲಿನ ಮಾನವ ಪ್ರಯೋಗಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯಿಂದ ಆಯ್ಕೆಯಾಗಿರುವ 12 ವೈದ್ಯಕೀಯ ಕೇಂದ್ರಗಳಲ್ಲಿ ಐಎಂಎಸ್ ಮತ್ತು ಎಸ್ ಯುಎಂ ಆಸ್ಪತ್ರೆಯೂ ಒಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com