ಇಂದು ರೈತರ ಜತೆ ಕೇಂದ್ರದ ಮಹತ್ವದ ಮಾತುಕತೆ ಹಿನ್ನೆಲೆ, ಶಾ ಭೇಟಿಯಾಗಲಿರುವ ಅಮರೀಂದರ್ ಸಿಂಗ್
ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವಣ ಮಾತುಕತೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ಬೆಳಗ್ಗೆ ಶಾ ಅವರ ನಿವಾಸದಲ್ಲಿ ಮಾತುಕತೆ ನಡೆಸಲಿರುವ ಅಮರೀಂದರ್ ಸಿಂಗ್, ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪಂಜಾಬ್ ಮುಖ್ಯಮಂತ್ರಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕೇಂದ್ರದ ಕೃಷಿ ಶಾಸನಗಳನ್ನು ತಿರಸ್ಕರಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಎಲ್ಲರ ಸಾಮೂಹಿಕ ಹಿತಾಸಕ್ತಿಯಿಂದ ಕೇಂದ್ರ ಸರ್ಕಾರ ಮತ್ತು ರೈತರ ನಡುವಣ ಮಧ್ಯಸ್ಥಿಕೆಗೆ ತಾವು ಹಾಗೂ ಅವರ ಸರ್ಕಾರ ಬದ್ಧವಾಗಿರುವುದಾಗಿ ಸಿಂಗ್ ಹೇಳಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ ಹೆಚ್ಚಿನವರು ಪಂಜಾಬ್ ರಾಜ್ಯದವರಾಗಿದ್ದಾರೆ. ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಏಳುದಿನಗಳಿಂದ ಅವರು ಪ್ರತಿಭಟನೆಗೆ ಕುಳಿತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ