ಬಿ.ವಿ.ಶ್ರೀನಿವಾಸ್
ದೇಶ
ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ವಿ. ಶ್ರೀನಿವಾಸ್ ನೇಮಕ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ಅವರನ್ನು ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ಅವರನ್ನು ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಶ್ರೀನಿವಾಸ್ ಅವರನ್ನು ಭಾರತೀಯ ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಕಳೆದ ವರ್ಷ ಆಗಸ್ಟ್‌ನಲ್ಲಿ ಶ್ರೀನಿವಾಸ್ ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಯ ರಾಷ್ಟ್ರೀಯ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಕ್ಷದ ಹಲವಾರು ಹಿರಿಯ ಮುಖಂಡರು ಭಾಗವಹಿಸಿದ್ದರು ಎಂದು ಭಾರತೀಯ ಯುವ ಕಾಂಗ್ರೆಸ್ ಹೇಳಿದೆ.

