ದೇಶ

ಕೋವಿಡ್-19: ದೇಶದಲ್ಲಿಂದು 36,652 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96 ಲಕ್ಷ

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯ ಇಳಿಮುಖ ಹಾದಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 36,652 ಮಂದಿಗೆ ಹೊಸದಾಗಿ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಕೋವಿಡ್-19: ದೇಶದಲ್ಲಿಂದು 36,652 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 96 ಲಕ್ಷ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯ ಇಳಿಮುಖ ಹಾದಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 36,652 ಮಂದಿಗೆ ಹೊಸದಾಗಿ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ. 

ದೇಶದಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 96,08,211ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 540 ಮಂದಿ ಸೋಂಕಿಗೆ ಸಾವನ್ನಪ್ಪಿದ್ದಾರೆ.ಇದುವರೆಗೂ ಮೃತಪಟ್ಟವರ ಸಂಖ್ಯೆ 1,39,700ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಹೊಸ ಪ್ರಕರಣಗಳಿಗೆ ಹೋಲಿಸಿದರೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 42,533 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 90,58,822 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂತಿರುಗಿದ್ದಾರೆ. 

ದೇಶದಲ್ಲಿ ಇದೀಗ 4,09,689 ಸಕ್ರಿಯ ಪ್ರಕರಣಗಳಿವೆ. ಕೊರೋನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆಯನ್ನು ಹೆಚ್ಚಿಸಲಾಗುತ್ತಿದೆ.

ಭಾರತದಲ್ಲಿ ಒಂದೇ ದಿನ 11,57,763 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,58,85,512 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.