ರೈತರ ಭಾರತ್ ಬಂದ್ ಗೆ ಅಣ್ಣ ಹಜಾರೆ ಬೆಂಬಲ: ಒಂದು ದಿನದ ಉಪವಾಸ ಸತ್ಯಾಗ್ರಹ

ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್‌ ಬಂದ್‌‘ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದಾರೆ.
ಅಣ್ಣಾ ಹಜಾರೆ
ಅಣ್ಣಾ ಹಜಾರೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್‌ ಬಂದ್‌‘ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ಸೂಚಿಸಿದ್ದಾರೆ.

ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದ್ದಾರೆ.‌ ಮಹಾರಾಷ್ಟ್ರದ ಅಹಮದ್‌ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು‘ ಎಂದು ಹೇಳಿದರು.

ಸರ್ಕಾರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ‘ ಎಂದು ಆರೋಪಿಸಿದ ಹಜಾರೆಯವರು, ‘ದೆಹಲಿಯಲ್ಲಿ ನಡೆಯುತ್ತಿರುವ ಈ ಆಂದೋಲನವು ದೇಶಾದ್ಯಂತ ವಿಸ್ತರಿಸಬೇಕೆಂದು ದೇಶದ ಜನರಲ್ಲಿ ನಾನು ಮನವಿ ಮಾಡುತ್ತಿದ್ದೇನೆ‘ ಎಂದರು. 

‘ರೈತರು ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಇದು ಸರಿಯಾದ ಸಮಯ‘ ಎಂದ ಅವರು ‘ನಾನು ಹಿಂದೆಯೂ ರೈತರ ಹೋರಾಟವನ್ನು ಬೆಂಬಲಿಸುತ್ತಿದ್ದೆ. ಅದನ್ನು ಈಗಲೂ ಮುಂದುವರಿಸುತ್ತೇನೆ‘ ಎಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com