ರೈತರ ಪ್ರತಿಭಟನೆ, ಕೊರೋನಾ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧಾರ

ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸೆಂಬರ್ 9 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Updated on: 

ನವದೆಹಲಿ: ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸೆಂಬರ್ 9 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ದೇಶಾದ್ಯಂತ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ತೊಂದರೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು "ಕಠಿಣ" ಕೃಷಿ ಮಸೂದೆಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನದ ಮಧ್ಯೆ ತಮ್ಮ ಜನ್ಮ ದಿನಾಚರಣೆ ಆಚರಿಸದಿರಲು ಸೋನಿಯಾ ನಿರ್ಧರಿಸಿದ್ದಾರೆಂದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು  ಎಲ್ಲಾ ರಾಜ್ಯಗಳ ಉಸ್ತುವಾರಿ ಮತ್ತು ಪಿಸಿಸಿ ಅಧ್ಯಕ್ಷರಿಗೆ ಸಂದೇಶ ರವಾನಿಸಿದ್ದಾರೆ.

ರೈತರು ಇಂತಹ ಚಳಿಯ ವಾತಾವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ, ಹೀಗಿರುವಾಗ ಹುಟ್ಟುಹಬ್ಬ ಆಚರಿಸುವುದು ಸೂಕ್ತವಲ್ಲ ಎಂದು ನಿರ್ಧರಿಸಿರುವ ಸೋನಿಯಾ, ಹುಟ್ಟುಹಬ್ಬ ಆಚರಣೆ ಬದಲು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಎಲ್ಲಾ ರಾಜ್ಯಗಳ ಉಸ್ತುವಾರಿಗಳಿಗೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.

ಸೋನಿಯಾ ಗಾಂಧಿ ಅವರ ಜನ್ಮದಿನದಂದು ಕೇಕ್ ಕತ್ತರಿಸುವುದು ಸೇರಿದಂತೆ ಎಲ್ಲಾ ರೀತಿಯ ಆಚರಣೆಗಳನ್ನು ನಿಲ್ಲಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಾಂಗ್ರೆಸ್ ನ ಎಲ್ಲಾ ರಾಜ್ಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com