
ಅಹ್ಮದಾಬಾದ್: ಬೆಂಗಳೂರಿನಂತೆಯೇ ಗುಜರಾತ್ ನಲ್ಲೂ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ವತ್ವಾ ಪ್ರದೇಶದಲ್ಲಿ ಈ ದುರಂತ ನಡೆದಿದ್ದು, ದುರ್ಘಟನೆಯಲ್ಲಿ ಯಾವುದೇ ಸೋವುನೋವಿನ ಬಗ್ಗೆ ವರದಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್ ಪೊಲೀಸರು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.
Advertisement