'ತಾತ'ನಾದ ಸಂಭ್ರಮದಲ್ಲಿ ದೇಶದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ!

ಭಾರತದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ ಅಜ್ಜನಾದ ಸಂಭ್ರಮದಲ್ಲಿದ್ದಾರೆ.
ಮುಕೇಶ್ ಅಂಬಾನಿ
ಮುಕೇಶ್ ಅಂಬಾನಿ
Updated on

ಮುಂಬೈ: ಭಾರತದ ಅತೀ ದೊಡ್ಡ ಶ್ರೀಮಂತ ಮುಕೇಶ್ ಅಂಬಾನಿ ಅಜ್ಜನಾದ ಸಂಭ್ರಮದಲ್ಲಿದ್ದಾರೆ. 

ಮುಕೇಶ್ ಅಂಬಾನಿ-ನೀತಾ ಅಂಬಾನಿಯವರ ಮಗ ಆಕಾಶ್ ಅಂಬಾನಿ ಅವರ ಪತ್ನಿ ಶ್ಲೋಕಾ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಮುಕೇಶ್ ದಂಪತಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕೃಷ್ಣ ಪರಮಾತ್ಮನ ದಯೆ ಮತ್ತು ಆಶೀರ್ವಾದದಿಂದ ಶ್ಲೋಕಾ ಹಾಗೂ ಆಕಾಶ್ ಅಂಬಾನಿ ಅವರಿಗೆ ಗಂಡು ಮಗು ಜನನವಾಗಿದೆ ಎಂದು ತಿಳಿಸಿದ್ದಾರೆ.

2019ರ ಮಾರ್ಚ್ ತಿಂಗಳಲ್ಲಿ ಆಕಾಶ್-ಶ್ಲೋಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com