ಹೈದರಾಬಾದ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಹಲವರಿಗೆ ಗಂಭೀರ ಗಾಯ

ಹೈದರಾಬಾದ್ ನ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಹಲವು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವಘಡ ದೃಶ್ಯ
ಅವಘಡ ದೃಶ್ಯ
Updated on

ಹೈದರಾಬಾದ್: ಹೈದರಾಬಾದ್ ನ ಹೊರವಲಯದಲ್ಲಿರುವ ಬೊಲ್ಲಾರಮ್ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಹಲವು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಘಟನೆಯಲ್ಲಿ ಸುಮಾರು 10 ಕಾರ್ಮಿಕರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಕುಕಟ್ ಪಲ್ಲಿ, ಪತಂಚೇರು, ಮತ್ತು ಮಿಯಾಪುರದ ಮೂರು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಮಧ್ಯಾಹ್ನ 1: 30ರ ಸುಮಾರಿಗೆ ಕರೆ ಬಂದಿತ್ತು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾವಣಿ ಹಾಳೆಗಳು ಸೇರಿದಂತೆ ಭಗ್ನಾವಶೇಷಗಳನ್ನು ಗಾಳಿಯಲ್ಲಿ ಹಾರುತ್ತಿದ್ದು ಇದು ಸುತ್ತಮುತ್ತಲ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com