
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಆಳವಾದ ಕಂದಕಕ್ಕೆ ಬಿದ್ದು ಭಾರತೀಯ ಯೋಧ ಮೃತಪಟ್ಟಿದ್ದಾರೆ.
ಲ್ಯಾನ್ಸ್ ನಾಯಕ್ ಸುರೇಶ್ ಗುರ್ಗೆ ನೌಶೇರಾ ಸೆಕ್ಟರ್‌ನ ಕಲಾಲ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು ಸಂದರ್ಭದಲ್ಲಿ ಕಮರಿಗೆ ಜಾರಿಬಿದ್ದು ಬಿದ್ದು ತೀವ್ರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುರೇಶ್ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement