ದೇಶ

ದೇಶದಲ್ಲಿ ಹೊಸದಾಗಿ 30,005 ಕೊರೋನಾ ಪ್ರಕರಣ ದೃಢ; ಸಕ್ರಿಯ ಪ್ರಕರಣಗಳ ಸಂಖ್ಯೆ 3.59 ಲಕ್ಷಕ್ಕೆ ಇಳಿಕೆ

ಕೊರೋನಾ ದೈನಂದಿನ ಏರಿಕೆಯಲ್ಲಿ ನಿಧಾನವಾಗಿ ಇಳಿಮುಖವಾಗುತ್ತಿರುವ ಭಾರತದಲ್ಲಿ ಶನಿವಾರ 30,005 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಹೊಸದಾಗಿ 30,005 ಕೊರೋನಾ ಪ್ರಕರಣ ದೃಢ; ಸಕ್ರಿಯ ಪ್ರಕರಣಗಳ ಸಂಖ್ಯೆ 3.59 ಲಕ್ಷಕ್ಕೆ ಇಳಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಕೊರೋನಾ ದೈನಂದಿನ ಏರಿಕೆಯಲ್ಲಿ ನಿಧಾನವಾಗಿ ಇಳಿಮುಖವಾಗುತ್ತಿರುವ ಭಾರತದಲ್ಲಿ ಶನಿವಾರ 30,005 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. .

ಹೊಸ ಪ್ರಕರಣಗಳೊಂದಿಗೆ, ದೇಶದಲ್ಲಿ ಒಟ್ಟಾರೆ ಸೋಂಕಿನ ಸಂಖ್ಯೆ ಈಗ 98,26,775ಕ್ಕೆ ತಲುಪಿದೆ ಎಂದು ಅಂಕಿಅಂಶ ತಿಳಿಸಿದೆ.

ಇನ್ನು ನಿನ್ನೆ ಒಂದೇ ದಿನ 442 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,42,628 ಕ್ಕೆ ತಲುಪಿದೆ. 

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 33,494 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಈ ವರೆಗೂ ಚೇತರಿಸಿಕೊಂಡವರ ಸಂಖ್ಯೆ 93,24,328ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಘಳ ಸಂಖ್ಯೆ 3,59,819ಕ್ಕೆ ಇಳಿಕೆಯಾಗಿದೆ. ಹೊಸ ಪ್ರಕರಣಗಳಿಗಿಂತ ಹೆಚ್ಚಾಗಿ ಚೇತರಿಕೆ ಕಂಡುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.