ಉತ್ತರ ಪ್ರದೇಶ: ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ, ಆರ್ಮಿ ಕರ್ನಲ್ ವಿರುದ್ಧ ಕೇಸ್ ದಾಖಲು
ಕಾನ್ಪುರ: ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಿಯೋಜನೆಗೊಂಡಿದ್ದ ಸೇನಾ ಕರ್ನಲ್ ಒಬ್ಬರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಪತಿ, ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಸೇನಾಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಪೂರ್ವ) ರಾಜ್ ಕುಮಾರ್ ಅಗರ್ವಾಲ್ ಹೇಳಿದ್ದಾರೆ.
ದೂರುದಾರರ ಪ್ರಕಾರ, ಅವರ ಪತ್ನಿ ರಷ್ಯಾ ಮೂಲದವರಾಗಿದ್ದು, 10 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ.
ಲೆಫ್ಟಿನೆಂಟ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಬಡ್ತಿ ಪಡೆದ ಸಂದರ್ಭದಲ್ಲಿ ಕರ್ನಲ್ ತನ್ನ ಹೆಂಡತಿ ಮತ್ತು ತಮ್ಮನ್ನು ಪಾರ್ಟಿಗೆ ಆಹ್ವಾನಿಸಿದ್ದರು. ನಾವು ಇಬ್ಬರೂ ಪಾರ್ಟಿಗೆ ತೆರಳಿದ ವೇಳೆ ಕರ್ನಲ್ ಸ್ನೇಹಿತ ತನ್ನ ಪತ್ನಿಯ ಪ್ರಜ್ಞೆ ತಪ್ಪಿಸಲು ತನ್ನ ಮಾದಕ ದ್ರವ್ಯವನ್ನು ನೀಡಿ, ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯ ಪತಿ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ನನ್ನ ಪತ್ರಿ ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಕರ್ನಲ್ ಹಲ್ಲೆ ಮಾಡಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ.
ಈ ಸಂಬಂಧ ಪೊಲೀಸರು ಕರ್ನಲ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ