ಸಂಸತ್ ದಾಳಿಗೆ 19 ವರ್ಷ: ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, ಅಮಿತ್ ಶಾ!

2001ರ ಸಂಸತ್ ಭವನದ ಮೇಲಿನ ಭಯೋತ್ಪಾದಕ ದಾಳಿಗೆ 19 ವರ್ಷ ತುಂಬಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 
ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿರುವ ಪ್ರಧಾನಿ ಮೋದಿ
ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿರುವ ಪ್ರಧಾನಿ ಮೋದಿ

ನವದೆಹಲಿ: 2001ರ ಸಂಸತ್ ಭವನದ ಮೇಲಿನ ಭಯೋತ್ಪಾದಕ ದಾಳಿಗೆ 19 ವರ್ಷ ತುಂಬಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ದಾಳಿಯಲ್ಲಿ ಹುತಾತ್ಮರಾದವರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಆನಿ ಮೋದಿ, ರಾಜನಾಥಅ ಸಿಂಗ್, ಅಮಿತ್ ಶಾ, ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಮೋದಿಯವರು, 2001 ರಲ್ಲಿ ಈ ದಿನ ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವ ಸಲುವಾಗಿ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ನಾವು ನೆನೆಯುತ್ತಿದ್ದೇವೆ. ವೀರ ಯೋಧರಿಗೆ ನಾವೆಂದಿಗೂ ಕೃತಜ್ಞರಾಗಿರಬೇಕೆಂದು ಹೇಳಿದ್ದರು. 

ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಹೇಡಿ ಭಯೋತ್ಪಾದಕರನ್ನು ಹೆಡೆಮುರಿ ಕಟ್ಟಿ ತಮ್ಮ ಪ್ರಾಣ ಅರ್ಪಿಸಿದ ಭಾರತಾಂಬೆಯ ವೀರ ಪುತ್ರರಿಗೆ ಕೋಟಿ ಕೋಟಿ ನಮನಗಳು ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಟ್ವೀಟ್ ಮಾಡಿ, ಹುತಾತ್ಮರಿಗೆ ಗೌರವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಡಿಸೆಂಬರ್ 13, 2001ರಂದು ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭೀಕರ ದಾಳಿ ನಡೆಸಿದ್ದರು. ದಾಳಿಯಲ್ಲಿ ಆರು ಪೊಲೀಸರು ಸೇರಿದಂತೆ ಒಟ್ಟು 79 ಮಂದಿ ಭಯೋತ್ಪಾಕರ ಕೌರ್ಯಕ್ಕೆ ಬಲಿಯಾಗಿ, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. 

ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಇಂದಿಗೆ 19 ವರ್ಷಗಳು ಕಳೆದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com