ರಾಜಸ್ಥಾನದಲ್ಲಿ ಭೀಕರ ಅಪಘಾತ: ವಾಹನಗಳ ಮುಖಾಮುಖಿ ಡಿಕ್ಕಿ, ಕನಿಷ್ಠ 10 ಸಾವು!, ಪ್ರಧಾನಿ ಮೋದಿ ಸಂತಾಪ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 10 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತೋರ್ ಘಡ್: ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 10 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ.

ರಾಜಸ್ಥಾನದ ಚಿತೋರ್ ಘಡದ ನಿಕುಂಬ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಜೀಪ್ ಮತ್ತು ಟ್ರಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಈ ವೇಳೆ ಜೀಪ್ ನಲ್ಲಿದ್ದವರ ಪೈಕಿ ಕನಿಷ್ಟ 10 ಮಂದಿ ಸಾವನ್ನಪ್ಪಿದ್ದಾರೆ,  

ಮೂಲಗಳ ಪ್ರಕಾರ ಜೀಪ್ ನಲ್ಲಿ 16 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಜೀಪ್ ನಲ್ಲಿದ್ದವರು ಮಧ್ಯ ಪ್ರದೇಶದ ರತ್ಲಮ್ ಜಿಲ್ಲೆಯ ನಿವಾಸಿಗಳು ಎನ್ನಲಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ನಿಕುಂಬ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಅಪಘಾತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಸಂತ್ರಸ್ಥರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಂತೆಯೇ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com