ಕಾಶ್ಮೀರ: ಪೂಂಚ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಓರ್ವನ ಬಂಧನ 

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್‌ಕೋಟ್‌ ಬಳಿ ಭದ್ರತಾ ಪಡೆಗಳೊಂದಿಗೆ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಹಾಗೂ ಓರ್ವನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರನ್‌ಕೋಟ್‌ ಬಳಿ ಭದ್ರತಾ ಪಡೆಗಳೊಂದಿಗೆ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರರನ್ನು ಹತ್ಯೆ ಮಾಡಲಾಗಿದೆ ಹಾಗೂ ಓರ್ವನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಉಗ್ರರು ಮೂರು ದಿನಗಳ ಹಿಂದೆಯೇ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯಿಂದ ಭಾರತಕ್ಕೆ ನುಸುಳಿದ್ದಾರೆ ಮತ್ತು ಇಂದು ಮಧ್ಯಾಹ್ನ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಗೆ ತೆರಳುತ್ತಿದ್ದಾಗ ಮೊಘಲ್ ರಸ್ತೆಯಲ್ಲಿ ಅವರನ್ನು ತಡೆದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದು ಲಷ್ಕರ್-ಎ-ತೋಯಿಬಾ(ಎಲ್‌ಇಟಿ) ಮತ್ತು ಜೈಶ್-ಇ-ಮೊಹಮ್ಮದ್(ಜೆಇಎಂ) ಉಗ್ರರ ಕೃತ್ಯವಾಗಿದ್ದು, ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಅಡ್ಡಿಪಡಿಸಲು ಯತ್ನಿಸುತ್ತಿದ್ದರು ಎಂದ ಅವರು ತಿಳಿಸಿದ್ದಾರೆ.

ಮೂವರು ಶಂಕಿತ ಉಗ್ರರು ಬಗ್ಗೆ ಖಚಿತ ಮಾಹಿತಿ ಆದರಿಸಿ ಪೊಲೀಸರು ಹಾಗೂ ಸೇನೆ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com