ಸಂಸತ್ ಭವನ
ಸಂಸತ್ ಭವನ

ಕೊರೋನಾ ಎಫೆಕ್ಟ್: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು

ಎರಡನೇ ಹಂತದ ಕೊರೋನಾ  ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ಧು ಪಡಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ

ನವದೆಹಲಿ: ಎರಡನೇ ಹಂತದ ಕೊರೋನಾ  ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ಧು ಪಡಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಗಡಿಭಾಗದಲ್ಲಿ ಸಾವಿರಾರು ರೈತರು ವಿವಾದಿತ ಕೃಷಿ ಮಸೂದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು. ಈ ಸಂಬಂಧ ಚರ್ಚಿಸಲು ಅಧಿವೇಶನ ನಡೆಸಬೇಕೆಂದು ಕಾಂಗ್ರೆಸ್ ನ ಅಧೀರ್ ರಂಜನ್ ಚೌಧರಿ ಪತ್ರಕ್ಕೆ ಜೋಶಿ ಉತ್ತರ ನೀಡಿದ್ದಾರೆ. ಜೊತೆಗೆ ಜನವರಿಯಲ್ಲಿ ಬಜೆಟ್ ಕಲಾಪ ನಡೆಯಲಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಪಕ್ಷಗಳ ಮುಖಂಡರ ಜೊತೆಗೆ ಚರ್ಚೆ ನಡೆಸಿದ್ದು, ಕೊರೋನಾ ಹಿನ್ನೆಲೆಯಲ್ಲಿ ಅಧಿವೇಶನ ನಡೆಸಬಾರದೆಂಬ ತೀರ್ಮಾನಕ್ಕೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿರುವುದಾಗಿ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com