ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ: ಪ್ರಧಾನಿ ಮೋದಿ ಗೌರವ ನಮನ

ಭಾರತದ ಸ್ವತಂತ್ರ ಹೋರಾಟಗಾರ, ಭಾರತದ ಏಕೀಕರಣದ ಪಿತಾಮಹ. ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದ ಸ್ವತಂತ್ರ ಹೋರಾಟಗಾರ, ಭಾರತದ ಏಕೀಕರಣದ ಪಿತಾಮಹ. ದೇಶದ ಮೊದಲ ಕಾಂಗ್ರೆಸ್ ಸರ್ಕಾರದ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. 

ಬಲವಾದ ಮತ್ತು ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸುತ್ತಿದ್ದೇನೆ. ಸರ್ದಾರ್ ಪಟೇಲ್ ಅವರು ದೇಶದ ಏಕತೆ, ಸಮಗ್ರತೆ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಲು ತೋರಿಸಿಕೊಟ್ಟಿರುವ ಮಾರ್ಗ ನಮಗೆಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದ್ದಾರೆ. 

ಮೊದಲ ಉಪಪ್ರಧಾನಿಯೂ ಆಗಿದ್ದ ಪಟೇಲ್‌ ಅವರು 1950ರ ಡಿಸೆಂಬರ್‌ 15ರಂದು ಸಾವಿಗೀಡಾಗಿದ್ದರು. ‘ಭಾರತದ ಉಕ್ಕಿನ ಮನುಷ್ಯ’ ಎಂದೇ ಖ್ಯಾತವಾಗಿದ್ದ ಅವರು, ದೇಶದ ಎಲ್ಲಾ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com