

ನವದೆಹಲಿ: ದೇಶದಲ್ಲಿ ಮಂಗಳವಾರ 22,065 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದೃಢಪಟ್ಟಿದೆ. ಇದು ಜುಲೈ ತಿಂಗಳ ಬಳಿಕ ದೇಶದಲ್ಲಿ ಒಂದಿ ದಿನದಲ್ಲಿ ಪತ್ತೆಯಾದ ಕನಿಷ್ಠ ಪ್ರಕರಣವಾಗಿದೆ.
ಇದೇ ವೇಲೆ ಒಂದೇ ದಿನ 354 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,43,709ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 99,06,165ಕ್ಕೆ ತಲುಪಿದೆ. ನಿನ್ನೆ ಒಂದೇ ದಿನ 34,477 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈ ವರೆಗೂ ಚೇತರಿಸಿಕೊಂಡವರ ಸಂಖ್ಯೆ 94,22,636ಕ್ಕೆ ಏರಿಕೆಯಾಗಿದೆ. ಇದೀಗ ದೇಶದಲ್ಲಿ ಒಟ್ಟಾರೆ 3,39,820 ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದಲ್ಲಿ ನಿನ್ನೆ ಒಂದೇ ದಿನ 9,93,665 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 15,55,60,655 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.