ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಎಲ್ ಡಿಎಫ್ ಗೆ ಮುನ್ನಡೆ, ಬಿಜೆಪಿಗೆ 'ಅಯ್ಯಪ್ಪ'ನ ಅಭಯ!

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಆಡಳಿತ ಪಕ್ಷ-ವಿಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ, ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಪ್ರಾಬಲ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರವಿರುವ ಪಂದಳದಲ್ಲಿ ಬಿಜೆಪಿ ಗೆಲುವಿನ ಖಾತೆ ತೆರೆದಿದೆ.
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಆಡಳಿತ ಪಕ್ಷ-ವಿಪಕ್ಷದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ, ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಎಲ್ ಡಿಎಫ್ ಪ್ರಾಬಲ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರವಿರುವ ಪಂದಳದಲ್ಲಿ ಬಿಜೆಪಿ ಗೆಲುವಿನ ಖಾತೆ ತೆರೆದಿದೆ.

2018 ರಲ್ಲಿ ಶಬರಿಮಲೆ ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರ ಪ್ರವೇಶವನ್ನು ಕೋರ್ಟ್ ಆದೇಶದ ಹೊರತಾಗಿಯೂ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಈಗ ಶಬರಿಮಲೆ ಕ್ಷೇತ್ರವಿರುವ ಪಂದಳಂ ಪುರಸಭೆಯಲ್ಲಿ 33 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳನ್ನು ಗೆದ್ದಿದ್ದು ಎಲ್ ಡಿಎಫ್ ನಿಂದ ಅಧಿಕಾರವನ್ನು ಕಸಿದು ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದೆ.

ಪಂದಳಂ ರಾಜಮನೆತನದವರಿದ್ದ ಕ್ಷೇತ್ರವಾಗಿದ್ದು, 2018 ರಲ್ಲಿ ಪ್ರಬಲ ಪ್ರತಿಭಟನೆಗೆ ಸಾಕ್ಷಿಯಾಗಿತ್ತು.

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಆಡಳಿತಾರೂಢ ಎಲ್ ಡಿಎಫ್ ಯುಡಿಎಫ್ ಗಿಂತಲೂ ಮುನ್ನಡೆ ಸಾಧಿಸಿದೆ.

ಶಬರಿಮಲೆ ಕ್ಷೇತ್ರದ ಪ್ರದೇಶದಲ್ಲಿ ಬಿಜೆಪಿಗೆ ಅಧಿಕಾರ ದೊರೆತಿದ್ದರೆ, ತಿರುವನಂತಪುರಂ ನಲ್ಲಿ ಮಾತ್ರ ಬಿಜೆಪಿಗೆ ಹಿನ್ನಡೆಯುಂಟಾಗಿದೆ. ಕೊಚ್ಚಿಯಲ್ಲಿ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯುಂಟಾಗಿದೆ. 

ತಿರುವನಂತಪುರಂ ನಿರ್ಗಮಿತ ಸಿಪಿಎಂ ಮೇಯರ್ ಗೆ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು! 

ತಿರುವನಂತಪುರಂ ನಲ್ಲಿ ನಿರ್ಗಮಿತ ಸಿಪಿಎಂ ಮೇಯರ್ ಕೆ ಶ್ರೀಕುಮಾರ್ ಕರಿಕ್ಕಾಕಂ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ದಾರೆ. ಶ್ರೀ ಕುಮಾರ್ ಸಿಪಿಎಂ ನ ಸ್ಥಳೀಯ ಜನಪ್ರಿಯ ನಾಯಕನಾಗಿದ್ದು, ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿರುವುದು ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com