ನಡ್ಡಾ ಬೆಂಗಾವಲು ಮೇಲೆ ದಾಳಿ: ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಕೇಂದ್ರ

ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರದ ಆಕ್ಷೇಪಣೆಯನ್ನು ಕಡೆಗಣಿಸಿ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗಳಿಗೆ ವರ್ಗಾಯಿಸಿ ಗುರುವಾರ ಆದೇಶ ಹೊರಡಿಸಿದೆ.
ಅಮಿತ್ ಶಾ
ಅಮಿತ್ ಶಾ

ಕೋಲ್ಕತಾ: ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಸರ್ಕಾರದ ಆಕ್ಷೇಪಣೆಯನ್ನು ಕಡೆಗಣಿಸಿ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗಳಿಗೆ ವರ್ಗಾಯಿಸಿ ಗುರುವಾರ ಆದೇಶ ಹೊರಡಿಸಿದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಜಗಳ ಮುಂದುವರೆದಿದ್ದು, ಕೇಂದ್ರ ಗೃಹ ಸಚಿವಾಲಯ(ಎಂಎಚ್‌ಎ) ಇಂದು ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳಾದ ರಾಜೀವ್ ಮಿಶ್ರಾ(ಐಜಿ ದಕ್ಷಿಣ ಬಂಗಾಳ), ಪ್ರವೀಣ್ ತ್ರಿಪಾಠಿ(ಡಿಐಜಿ ಪ್ರೆಸಿಡೆನ್ಸಿ ರೇಂಜ್) ಮತ್ತು ಭೋಲನಾಥ್ ಪಾಂಡೆ(ಎಸ್ಪಿ, ಡೈಮಂಡ್ ಹಾರ್ಬರ್) ಅವರನ್ನು ಕೇಂದ್ರ ಸೇವೆಗೆ ನಿಯೋಜಿಸಿದೆ. ಈ ಮೂವರು ಅಧಿಕಾರಿಗಳು ಜೆಪಿ ನಡ್ಡಾ ಅವರ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದರು.

ಹಿಂದೆ ಈ ಮೂವರು ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವ ಕೇಂದ್ರ ಗೃಹ ಸಚಿವಾಲಯದ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿತ್ತು ಮತ್ತು ರಿಲೀವ್ ಮಾಡುವುದಿಲ್ಲ ಎಂದು ಹೇಳಿತ್ತು. ಆದರೂ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ವರ್ಗಾವಣೆ ಮಾಡಿದ ಕೇಂದ್ರ ಗೃಹ ಸಚಿವಾಲಯದ ಆದೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಈ ಕ್ರಮ "ರಾಜ್ಯದ ಅಧಿಕಾರ ವ್ಯಾಪ್ತಿಯನ್ನು ಅತಿಕ್ರಮಿಸುವ" ಪ್ರಯತ್ನ. "ರಾಜ್ಯದ ಆಕ್ಷೇಪಣೆಯ ಹೊರತಾಗಿಯೂ ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜನೆ ಮಾಡಿರುವ ಆದೇಶ ಐಪಿಎಸ್ ಕೇಡರ್ ರೂಲ್ 1954 ರ ತುರ್ತು ನಿಬಂಧನೆಯ ದುರುಪಯೋಗವಾಗಿದೆ ಎಂದು ದೀದಿ ಟ್ವೀಟ್ ಮಾಡಿದ್ದಾರೆ.

ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್‌ ಲೋಕಸಭಾ ಕ್ಷೇತ್ರಕ್ಕೆ ಹೋಗುವ ಸಂದರ್ಭದಲ್ಲಿ ನಡ್ಡಾ ಬೆಂಗಾವಲು ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com