
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಒಬ್ಬರಾದ ನಂತರ ಮತ್ತೊಬ್ಬರಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷ ತೊರೆಯುತ್ತಿದ್ದಾರೆ. ಇಬ್ಬರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಮತ್ತೋರ್ವ ಶಾಸಕರು ಕೂಡಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಿಲ್ಭದ್ರ ದತ್ತ ಇಂದು ಬೆಳಗ್ಗೆ ಟಿಎಂಸಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆಯಷ್ಟೇ ಸುವೇಂದು ಅಧಿಕಾರಿ ಮತ್ತು ಜಿತೇಂದ್ರ ತಿವಾರಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳ ಭೇಟಿ ಹಿಂದಿಂದೆ ಟಿಎಂಸಿ ಶಾಸಕರು ರಾಜೀನಾಮೆ ಸಲ್ಲಿಸುತ್ತಿದ್ದಾರೆ.
2016ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುವೇಂದು ಅಧಿಕಾರಿಯನ್ನು ಬಿಜೆಪಿ ಭೇಟಿಯಾಡಿದ ಬೆನ್ನಲ್ಲೇ, ಇನ್ನೂ ಹಲವು ಅತೃಪ್ತ ಶಾಸಕರು ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Advertisement