

ನವದೆಹಲಿ: ದೇಶದಲ್ಲಿಂದು 22,889 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 99,79,447ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,44,789ಕ್ಕೆ ತಲುಪಿದೆ ಎಂದು ತಿಳಿಸಿದೆ.
ಈ ನಡುವೆ ಒಟ್ಟಾರೆ 99,79,447 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 31,087 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 95,20,827ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,13,831 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಇನ್ನು ಭಾರತದಲ್ಲಿ ಒಂದೇ ದಿನ 11,13,406 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 15,89,18,646 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.