ಅಕ್ರಮ ಹಣ ವರ್ಗಾವಣೆ ಕೇಸ್: ಇಡಿಯಿಂದ ಫಾರೂಖ್ ಅಬ್ದುಲ್ಲಾರ 11.86 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ 

 ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾರ 11.86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಶನಿವಾರ ಜಪ್ತಿ ಮಾಡಿದೆ.
ಫಾರೂಖ್ ಅಬ್ದುಲ್ಲಾ
ಫಾರೂಖ್ ಅಬ್ದುಲ್ಲಾ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾರ 11.86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಶನಿವಾರ ಜಪ್ತಿ ಮಾಡಿದೆ.

ಜಮ್ಮು-ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಫಾರೂಖ್ ಅಬ್ದುಲ್ಲಾ ಅವರಿಗೆ ಸೇರಿದ 11.86 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಇಡಿ  ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಜಮ್ಮು ಮತ್ತು ಶ್ರೀನಗರದಲ್ಲಿರುವ ಎರಡು ಸ್ಥಿರಾಸ್ತಿಗಳು, ಮೂರು ಇತರ ಫ್ಲಾಟ್ ಗಳ ಭೂಮಿಯನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ 11.86 ಕೋಟಿ ಎಂದು ಲಗತ್ತಿಸಲಾಗಿದೆ. ಅವುಗಳ ಮಾರುಕಟ್ಟೆ ಮೌಲ್ಯ 60ರಿಂದ 70 ಕೋಟಿ ಎಂಬುದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 83 ವರ್ಷದ ನ್ಯಾಷನಲ್ ಕಾನ್ಫರೆನ್ಸ್ ನ ಹಿರಿಯ ಮುಖಂಡ ಫಾರೂಖ್ ಅಬ್ದುಲ್ಲಾ ಅವರನ್ನು ಅನೇಕ ಬಾರಿ ಇಡಿ ವಿಚಾರಣೆಗೊಳಪಡಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com