'ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುತ್ತಾ ಪ್ರಧಾನಿ ಮೋದಿ ನಮ್ಮ ಪ್ರತಿಭಟನೆ ವಿಷಯದಲ್ಲಿ ರಾಜಕೀಯದ ಆಟವಾಡುತ್ತಿದ್ದಾರೆ': ರೈತ ಸಂಘಟನೆ

ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ರೈತರು ಯೋಜನೆ ಹಾಕಿಕೊಳ್ಳುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on

ಚಂಡೀಗಢ: ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು ರೈತರು ಯೋಜನೆ ಹಾಕಿಕೊಳ್ಳುತ್ತಿದ್ದಾರೆ.

ಎಲ್ಲಾ ರಾಜ್ಯ ಘಟಕಗಳು ಸಂಪೂರ್ಣ ಶಕ್ತಿ, ಉತ್ಸಾಹದೊಂದಿಗೆ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ(ಎಐಕೆಎಸ್ ಸಿಸಿ) ಸಿದ್ದವಾಗಿದ್ದು ನಾಳೆ ಶ್ರದ್ಧಾಂಜಲಿ ದಿವಸ ಆಚರಿಸಲಿರುವ ರೈತರು ಇದನ್ನು ದೇಶದ 1 ಲಕ್ಷಕ್ಕೂ ಅಧಿಕ ಗ್ರಾಮಗಳಲ್ಲಿ ಅನುಸರಿಸಲಿದ್ದಾರೆ. ಮುಂಬೈಯಲ್ಲಿ ಡಿಸೆಂಬರ್ 22ರಂದು ಅಂಬಾನಿ ಮತ್ತು ಅದಾನಿ ಗ್ರೂಪ್ ಕಚೇರಿಯಲ್ಲಿ ರ್ಯಾಲಿ ಆಯೋಜಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಆರೋಪ ಮಾಡಿರುವ ಪ್ರತಿಭಟನಾಕಾರರು, ರೈತರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಬಿಜೆಪಿಯನ್ನು ವಿರೋಧಿಸುವವರ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ವಿರೋಧ ಪಕ್ಷದವರ ಜೊತೆ ಸೇರಿಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ರೈತರ ಮೇಲೆ ಪ್ರಧಾನಿಯವರು ಬಹಿರಂಗ ವಾಗ್ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂದು ಎಐಕೆಎಸ್ ಸಿಸಿ ಆರೋಪಿಸಿದೆ.

ರೈತರ ಹಕ್ಕುಗಳನ್ನು ಕಿತ್ತುಕೊಂಡು, ದೊಡ್ಡ ಉದ್ಯಮಗಳಿಗೆ ಅನುಕೂಲಕರವಾದ ಮೂರು ಕಾಯ್ದೆಗಳನ್ನು ರದ್ದುಗೊಳಿಸುವ ಬದಲು, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಪ್ರಧಾನಿಯವರು, ವಿರೋಧ ಪಕ್ಷದ ಮೇಲೆ ಆಪಾದನೆ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.
ಕೃಷಿ ಮೂಲಸೌಕರ್ಯಗಳಲ್ಲಿ ಹೂಡಿಕೆ ಮಾಡಲು ಕಾರ್ಪೊರೇಟ್ ಕಂಪೆನಿಗಳಿಗೆ ಮೋದಿ ಸರ್ಕಾರ 1 ಲಕ್ಷ ಕೋಟಿ ರೂಪಾಯಿ ನೀಡಿದೆ. ಆದರೆ ರೈತರಿಗೆ ಸಹಾಯವಾಗಲು ಯಾವುದೇ ಹಣ ನೀಡುತ್ತಿಲ್ಲ ಎಂದಿದೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಅವರು ರೈತರಿಗೆ ಬರೆದಿದ್ದ ಪತ್ರವನ್ನು ಉಲ್ಲೇಖಿಸಿ, ರೈತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳುವುದಿಲ್ಲ ಎಂದು ಸುಳ್ಳು ಭ್ರಮೆಯ ಆಶ್ವಾಸನೆಯನ್ನು ಕೊಡುತ್ತಿದ್ದಾರೆ. ಬಾಕಿ ಉಳಿಕೆ ಸಾಲವನ್ನು ಹಿಂಪಡೆಯಲು ರೈತರ ಜಮೀನನ್ನು ಅಡವಿಡುವ ವ್ಯವಸ್ಥೆ ಕಾಯ್ದೆಯಲ್ಲಿದೆ ಎಂದು ಎಐಕೆಎಸ್ ಸಿಸಿ ಆರೋಪಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com