

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 26,624 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 26,624 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 341 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,45,477ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ಒಂದೇ ದಿನ 29,690 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 95,80,402ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 3,05,344 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 11,07,681 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 16,11,98,195 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.