ಬೋಲ್‌ಪುರ: ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ, ಭ್ರಷ್ಟಾಚಾರ, ಸುಲಿಗೆ ಮತ್ತು ಬಾಂಗ್ಲಾದೇಶೀಯರ ಒಳ ನುಸುಳುವಿಕೆಯನ್ನು ತಡೆಯಲು ಪಶ್ಚಿಮ ಬಂಗಾಳದ ಜನ ಬದಲಾವಣೆ ಬಯಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.
ಇಂದು ಪಶ್ಚಿಮ ಬಂಗಾಳದ ಬೋಲ್‌ಪುರದಲ್ಲಿ ರೋಡ್ ಶೋದಲ್ಲಿ ಮಾತನಾಡಿದ ಅಮಿತ್ ಶಾ ಅವರು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಾನು ನನ್ನ ಜೀವನದಲ್ಲಿ ಹಲವಾರು ರೋಡ್ ಶೋಗಳನ್ನು ನಡೆಸಿದ್ದೇನೆ ಮತ್ತು ಆಯೋಜಿಸಿದ್ದೇನೆ. ಆದರೆ ಈ ರೀತಿಯ ರೋಡ್ ಶೋ ಯಾವತ್ತೂ ನೋಡಿಲ್ಲ. ಈ ರೋಡ್ ಶೋ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಜನರ ಆಕ್ರೋಶದ ಪ್ರತಿಬಿಂಬವಾಗಿದೆ. ಇಲ್ಲಿ ಸೇರಿರುವ ಜನಸ್ತೋಮವು ನರೇಂದ್ರ ಮೋದಿ ಅವರ ಅಭಿವೃದ್ಧಿ ಅಜೆಂಡಾದ ಮೇಲೆ ಜನರ ನಂಬಿಕೆಯನ್ನು ತೋರಿಸುತ್ತದೆ ಎಂದಿದ್ದಾರೆ.
ಬಂಗಾಳದ ಸಾಂಸ್ಕೃತಿಕ ಮತ್ತು ಸಾಹಿತ್ಯ ಕ್ಷೇತ್ರದ ಮೇರು ವ್ಯಕ್ತಿ ರವೀಂದ್ರನಾಥ ಟ್ಯಾಗೋರ್ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿರುವ ಪಟ್ಟಣವಿದು. ಹಿಂದೆ ‘ಸೋನರ್ ಬಾಂಗ್ಲಾ (ಬೆಂಗಾಲ್ ಆಫ್ ಗೋಲ್ಡ್)’ ಎಂದು ಕರೆಯುತ್ತಿದ್ದ ಇಲ್ಲಿನ ವೈಭವವನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ ಮರಳಿ ರೂಪಿಸಲಿದೆ ಎಂದು ಶಾ ಹೇಳಿದ್ದಾರೆ.
Advertisement