ಚೀನಾ-ಭಾರತೀಯ ಗಡಿ ಬಳಿ ಅಪಘಾತ: 4 ಭಾರತೀಯ ಯೋಧರು ದುರ್ಮರಣ

ಹಿಮ ಆವೃತ ನಾಥುಲಾ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸೇನಾ ಸಿಬ್ಬಂದಿ ದುರ್ಮರಣ ಹೊಂದಿದ್ದಾರೆ.
ಭಾರತೀಯ ಯೋಧ
ಭಾರತೀಯ ಯೋಧ
Updated on

ಗ್ಯಾಂಗ್ಟಾಕ್: ಹಿಮ ಆವೃತ ನಾಥುಲಾ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸೇನಾ ಸಿಬ್ಬಂದಿ ದುರ್ಮರಣ ಹೊಂದಿದ್ದಾರೆ.

ದಟ್ಟ ಹಿಮ ಆವರಿಸಿದ್ದರಿಂದ ಸೇನಾ ವಾಹನವು ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನಾ ವಾಹನದಲ್ಲಿ ಐವರು ಸೇನಾ ಸಿಬ್ಬಂದಿ ಇದ್ದರು. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಗೊಂಡ ಸೇನಾ ಸಿಬ್ಬಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ರವಾನಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com