ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನಾಳೆ ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವ ಉದ್ಘಾಟಿಸಲಿರುವ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಡಿ.22 ರಂದು ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಡಿ.22 ರಂದು ಭಾರತ ಅಂತರರಾಷ್ಟ್ರೀಯ ವಿಜ್ಞಾನ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. 

ಸ್ವಾವಲಂಬಿ ಭಾರತ ಹಾಗೂ ಜಾಗತಿಕ ಅಭ್ಯುದಯ ಎಂಬುದು ಈ ಬಾರಿಯ ಉತ್ಸವದ ಥೀಮ್ ಆಗಿರಲಿದೆ. ಡಿ.25 ರಂದು ಖ್ಯಾತ ಗಣಿತಜ್ಞ ಶ್ರೀನಿವಾಸ ರಾಮಾನುಜಮ್ ಹಾಗೂ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಮುಕ್ತಾಯಗೊಳ್ಳಲಿದ್ದು ಸಮಾರೋಪ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭಾಗಿಯಾಗಲಿದ್ದಾರೆ. 

ಮೂರು ದಿನಗಳ ಅವಧಿಯಲ್ಲಿ ಹಲವಾರು ರಾಜಕೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ. 

ಯುವಜನತೆಗೆ 21 ನೇ ಶತಮಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದಕ್ಕೆ ಸಹಾಯ ಮಾಡುವುದೇ ಐಐಎಸ್ಎಫ್2020 ರ ಉದ್ದೇಶವಾಗಿದೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com