ಪ್ರಧಾನಿ ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್
ಪ್ರಧಾನಿ ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್

ಅಮೆರಿಕಾದ ಪ್ರತಿಷ್ಠಿತ 'ಲೀಜನ್ ಆಫ್ ಮೆರಿಟ್' ಪ್ರಶಸ್ತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪ್ರತಿಷ್ಠಿತ ಲೀಜನ್ ಆಫ್  ಆಫ್ ಮೆರಿಟ್ ಪ್ರಶಸ್ತಿ ನೀಡಿ ತಮ್ಮನ್ನು ಗೌರವಿಸಲಾಗಿದ್ದು, ಅಮೆರಿಕಾ- ಭಾರತ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ತಮ್ಮ ದೃಢ ನಿಶ್ಚಯ ಹಾಗೂ ಬದ್ಧತೆಯೊಂದಿಗೆ ಅಮೆರಿಕಾ ಸರ್ಕಾರ ಹಾಗೂ ಇತರ ಪಾಲುದಾರರೊಂದಿಗೆ ಕಾರ್ಯವನ್ನು ಮುಂದುವರೆಸುವುದಾಗಿ  ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
Published on

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪ್ರತಿಷ್ಠಿತ ಲೀಜನ್ ಆಫ್  ಆಫ್ ಮೆರಿಟ್ ಪ್ರಶಸ್ತಿ ನೀಡಿ ತಮ್ಮನ್ನು ಗೌರವಿಸಲಾಗಿದ್ದು, ಅಮೆರಿಕಾ- ಭಾರತ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ತಮ್ಮ ದೃಢ ನಿಶ್ಚಯ ಹಾಗೂ ಬದ್ಧತೆಯೊಂದಿಗೆ ಅಮೆರಿಕಾ ಸರ್ಕಾರ ಹಾಗೂ ಇತರ ಪಾಲುದಾರರೊಂದಿಗೆ ಕಾರ್ಯವನ್ನು ಮುಂದುವರೆಸುವುದಾಗಿ  ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಭಾರತದ ಜನರ ಪ್ರಯತ್ನಗಳು ಹಾಗೂ ಅಮೆರಿಕದೊಂದಿಗೆ ದ್ವಿಪಕ್ಷೀಯ ಬಾಂಧವ್ಯದಲ್ಲಿ ಪ್ರಗತಿಯನ್ನು ಈ ಪ್ರಶಸ್ತಿ ಗುರುತಿಸಿದ್ದು,  ಉಭಯ ದೇಶಗಳ ನಡುವಣ ಕಾರ್ಯತಂತ್ರ ಪಾಲುದಾರಿಕೆ ಬಗ್ಗೆ ಉಭಯ ದೇಶಗಳ ಒಮ್ಮತವನ್ನು  ಇದು ಪ್ರತಿಫಲಿಸಲಿದೆ ಎಂದು ನರೇಂದ್ರ ಮೋದಿ ಸರಣಿ ಟ್ವೀಟ್ ಮೂಲಕ ತಿಳಿಸಿದ್ದಾರೆ. 

21 ನೇ ಶತಮಾನವು ಅಭೂತಪೂರ್ವ ಸವಾಲುಗಳು ಮತ್ತು ಅವಕಾಶಗಳನ್ನು ಒದಗಿಸಿರುವುದಾಗಿ ಹೇಳಿರುವ ಪ್ರಧಾನಿ, ಇಡೀ ಮಾನವೀಯತೆಯ ಅನುಕೂಲಕ್ಕಾಗಿ ಜಾಗತಿಕ ನಾಯಕತ್ವವನ್ನು ಒದಗಿಸಲು ನಮ್ಮ ಜನರ ಅನನ್ಯ ಸಾಮರ್ಥ್ಯವನ್ನು ಭಾರತ- ಅಮೆರಿಕಾ ಸಂಬಂಧ ಬಳಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೆಚ್ಚಿಸುವಲ್ಲಿ ಮತ್ತು ಜಾಗತಿಕ ಶಕ್ತಿಯಾಗಿ ಭಾರತದ ಹೊರಹೊಮ್ಮುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಪರಗಣಿಸಿ ಆ ರಾಷ್ಟ್ರದ ಅತ್ಯುನ್ನತ ಮಿಲಿಟರಿ ಗೌರವಗಳಲ್ಲಿ ಒಂದಾಗಿರುವ ಲೀಜನ್ ಆಫ್ ಮೆರಿಟ್ ಪ್ರಶಸ್ತಿಯನ್ನು ಡೊನಾಲ್ಡ್ ಟ್ರಂಪ್ ಪ್ರದಾನ ಮಾಡಿದರು.

ಶ್ವೇತಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರ ಪರವಾಗಿ ಅಮೆರಿಕಾದಲ್ಲಿನ ಭಾರತದ ರಾಯಭಾರಿ ತರನ್ ಜಿನ್ ಸಿಂಗ್ ಸಂಧು, ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯನ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com