

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಇಳಿಮುಖವಾಗುತ್ತಿರುವ ಬೆಳವಣಿಗೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 19,556 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ ಮಹಾಮಾರಿ ವೈರಸ್'ಗೆ 301 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,46,111ಕ್ಕೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,00,75,116ಕ್ಕೆ ತಲುಪಿದ್ದು, ನಿನ್ನೆ ಒಂದೇ ದಿನ 30,376 ಮಂದಿ ಗುಣಮುಖರಾಗುವುದರ ಜೊತೆಗೆ ಈ ವರೆಗೂ ಚೇತರಿಸಿಕೊಂಡವರ ಸಂಖ್ಯೆ 96,36,487ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಸೋಂಕಿತರ ಸಂಖ್ಯೆಗಿಂತಲೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪ್ರಸ್ತುತ 2,92,518 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ನಿನ್ನೆ ಒಂದೇ ದಿನ ದೇಶಾದ್ಯಂತ 10,72,228 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಭಾರತದಲ್ಲಿ ಒಟ್ಟಾರೆ 16,31,70,557 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.