ನವದೆಹಲಿ: ಅಫ್ಘಾನಿಸ್ತಾನ-ಫಿಲಿಪೈನ್ಸ್ ನಡುವಿನ ಪರಿಷ್ಕೃತ ವಿಮಾನ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಪರಿಷ್ಕೃತ ವಾಯು ಸೇವೆಗಳ ಒಪ್ಪಂದವು ಉಭಯ ದೇಶಗಳ ನಡುವಿನ ನಾಗರಿಕ ವಿಮಾನ ಯಾನ ಸಂಬಂಧಗಳಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಮತ್ತು ಉಭಯ ದೇಶಗಳ ನಡುವೆ ಹೆಚ್ಚಿನ ವ್ಯಾಪಾರ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಸಾಮರ್ಥ್ಯವನ್ನು ಹೊಂದಿದ್ದು, ನಾಗರಿಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಗಳಿಗೆ ಅನುಗುಣವಾಗಿದೆ. ಇದು ಹೆಚ್ಚಿನ ಭದ್ರತೆ ಮತ್ತು ಸುರಕ್ಷತೆಯ ಖಾತ್ರಿಯೊಂದಿಗೆ ಎರಡೂ ಕಡೆಯ ವಾಹಕಗಳಿಗೆ ವಾಣಿಜ್ಯ ಅವಕಾಶಗಳನ್ನು ನೀಡಲು ವರ್ಧಿತ ಮತ್ತು ತಡೆರಹಿತ ಸಂಪರ್ಕಕ ವ್ಯವಸ್ಥೆಯನ್ನು ಒದಗಿಸುತ್ತದೆ.
ಫಿಲಿಪೈನ್ಸ್ ಜೊತೆ ಪರಿಷ್ಕೃತ ವೈಮಾನಿಕ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಸಚಿವ ಸಂಪುಟ ಒಪ್ಪಿಗೆ
ಭಾರತ ಮತ್ತು ಫಿಲಿಪೈನ್ಸ್ ನಡುವಿನ ಪರಿಷ್ಕೃತ ವೈಮಾನಿಕ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಪರಿಷ್ಕೃತ ವೈಮಾನಿಕ ಸೇವೆಗಳ ಒಪ್ಪಂದವು ಉಭಯ ದೇಶಗಳ ನಡುವಿನ ನಾಗರಿಕ ವಿಮಾನಯಾನ ಸಂಬಂಧಗಳಲ್ಲಿ ಪ್ರಮುಖ ಹೆಗ್ಗುರುತೊಂದನ್ನು ಸೂಚಿಸುತ್ತದೆ. ಒಪ್ಪಂದವು ಹೆಚ್ಚಿನ ಸೇವೆಗಳು ಮತ್ತು ಸುಗಮ ಸಂಪರ್ಕಕ್ಕೆ ಸಹಕಾರಿಯಾಗಲಿದೆ. ಅಲ್ಲದೆ, ಸುರಕ್ಷತೆ ಮತ್ತು ಭದ್ರತೆಯೊಂದಿಗೆ ಎರಡೂ ದೇಶಗಳ ನಡುವಿನ ವಿಮಾನಯಾನ ಸಂಸ್ಥೆಗಳಿಗೆ ವಾಣಿಜ್ಯ ಅವಕಾಶಗಳನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.
ಉಭಯ ದೇಶಗಳ ನಡುವೆ ವ್ಯಾಪಾರ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯವನ್ನು ವೃದ್ಧಿಸುವ ಸಾಮರ್ಥ್ಯವನ್ನು ಒಪ್ಪಂದ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ.
Advertisement