ಕಾರು ಅಪಘಾತ: ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆಗೆ ಗಾಯ

ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈ ಬಳಿಯ ವಾಶಿ ಟೋಲ್ ನಾಕಾದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಕನಾಥ್ ಸಿಂಧೆ
ಏಕನಾಥ್ ಸಿಂಧೆ
Updated on: 

ಥಾಣೆ: ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈ ಬಳಿಯ ವಾಶಿ ಟೋಲ್ ನಾಕಾದಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ 4.30ರ ಸುಮಾರಿಗೆ ವಾಶಿಗೆ ಭೇಟಿ ನೀಡಿದ ನಂತರ ಸಚಿವರು ಮುಂಬೈಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಟೋಲ್ ಪಾಯಿಂಟ್ ಬಳಿ ಏಕನಾಥ್ ಶಿಂಧೆ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ ಎಂದು ನವಿಮುಂಬೈ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದಲ್ಲಿ ಸಚಿವರ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com