ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣ ಪತ್ತೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್
ಕೊರೋನಾ ವೈರಸ್
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 22,272 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶಾದ್ಯಂತ 251 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ  ಬಲಿಯಾದವರ ಸಂಖ್ಯೆ 1,47,343ಕ್ಕೆ ಏರಿಕೆಯಾಗಿದೆ.

ಇನ್ನು ನಿನ್ನೆ ಒಂದೇ ದಿನ 22,274 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 97,40,108ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಪ್ರಸ್ತುತ 2,81,667  ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ನಿನ್ನೆ ಒಂದೇ ದಿನ ದೇಶಾದ್ಯಂತ 8,53,527 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೆ ಈ ವರೆಗೂ 16,71,59,289 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com