ಪ್ರತಿಭಟನಾನಿರತ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸಲಿ: ರಾಹುಲ್ ಗಾಂಧಿ

ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸುವಂತೆ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನವದೆಹಲಿ: ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸುವಂತೆ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನಾನಿರತ ರೈತರ ಸಮಸ್ಯೆಯನ್ನು ಆಲಿಸುವಂತೆ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್ ಮತ್ತು ಅಧೀರ್ ರಂಜನ್ ಚೌಧರಿ ಡಿಸೆಂಬರ್ 24ರಂದು ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ 2 ಕೋಟಿ ಸಹಿ ಸಂಗ್ರಹದ ಮನವಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದರು. 

ರೈತ ವಿರೋಧಿ ಕಾನೂನುಗಳ ವಿರುದ್ಧ ರೈತರು ಸಿಡಿದೆದ್ದಿರುವುದನ್ನು ಇಡೀ ದೇಶ ನೋಡುತ್ತಿರುವುದಾಗಿ ರಾಷ್ಟ್ರಪತಿಗೆ ಹೇಳಿದ್ದಾಗಿ ರಾಹುಲ್ ಗಾಂಧಿ ಹೇಳಿದ್ದರು.

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿಯಲ್ಲಿ ನವೆಂಬರ್ 26ರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com