ಶಾರದಾ ಹಗರಣ: ಐಪಿಎಸ್ ಅಧಿಕಾರಿ ರಾಜೀವ್‌ ಕುಮಾರ್‌ ತನಿಖೆಗೆ ಅನುಮತಿ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸಿಬಿಐ

ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ  ಹಿರಿಯ ಐಪಿಎಸ್ ಅಧಿಕಾರಿಯನ್ನು ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ  ಹಿರಿಯ ಐಪಿಎಸ್ ಅಧಿಕಾರಿಯನ್ನು ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಇದಕ್ಕೂ ಮೊದಲು, ಅಕ್ಟೋಬರ್ 1, 2019 ರಂದು ಕೊಲ್ಕತ್ತಾ ಹೈಕೋರ್ಟ್ ರಾಜೀವ್ ಕುಮಾರ್‌ಗೆ ಜಾಮೀನು ನೀಡಿತ್ತು. ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿತ್ತು. 

ಆದರೆ, ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಸಿಬಿಐ, ರಾಜೀವ್‌ ಕುಮಾರ್‌ ತನಿಖೆಗೆ ಸಹಕರಿಸುತ್ತಿಲ್ಲ. ಬಹುಕೋಟಿ ಹಗರಣದ ಹಿಂದೆ ಇರುವವರನ್ನು ಬುಕ್ ಮಾಡಲು ಹೆಚ್ಚಿನ ವಿಚಾರಣೆ ಅಗತ್ಯ ಎಂದಿದೆ.

ಆಡಳಿತಾರೂಢ  ತೃಣಮೂಲ ಕಾಂಗ್ರೆಸ್ ಸದಸ್ಯರು ಮತ್ತು ಶಾರದಾ ಚಿಟ್ ಫಂಡ್‌ಗಳ ನಿರ್ದೇಶಕರನ್ನು ರಕ್ಷಿಸಲು ಫೋನ್ ದಾಖಲೆಗಳನ್ನು ನಾಶ ಮಾಡುವ ಮೂಲಕ ಕುಮಾರ್ ಸಾಕ್ಷ್ಯಗಳ ನಾಶದಲ್ಲಿ ಪಾಲ್ಗೊಂಡಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com