ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಗೇಟ್ ನಂಬರ್ 5 ರ ಬಳಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಭಾನುವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಜಾಮಿಯಾ ಸಮನ್ವಯ ಸಮಿತಿ ತಿಳಿಸಿದೆ.
ದಾಳಿಕೋರರು ಕೆಂಪು ಬಣ್ಣದ ಸ್ಕೂಟಿಯಲ್ಲಿದ್ದರು, ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ದುಷ್ಕರ್ಮಿಗಳ ಪೈಕಿ ಒಬ್ಬ ಕೆಂಪು ಬಣ್ಣದ ಜಾಕೆಟ್ ಧರಿಸಿದ್ದ ಎಂದು ಹೇಳಲಾಗಿದೆ. ಜಾಮಿಯಾ ಸಮನ್ವಯ ಸಮಿತಿ ನೀಡಿರುವ ಹೇಳಿಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement