ಕೊರೋನಾ ವೈರಸ್ ಅಟ್ಟಹಾಸ: 'ರಾಜ್ಯ ವಿಪತ್ತು ಎಂದು ಘೋಷಿಸಿದ ಕೇರಳ ಸರ್ಕಾರ

ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರನೇ ವಿದ್ಯಾರ್ಥಿಯಲ್ಲಿ ಈ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯ ವಿಪತ್ತು ಎಂದು ಸರ್ಕಾರ ಘೋಷಣೆ ಮಾಡಿದೆ
ಕೇರಳ ಆರೋಗ್ಯ ಸಚಿವೆ ಶೈಲಜಾ
ಕೇರಳ ಆರೋಗ್ಯ ಸಚಿವೆ ಶೈಲಜಾ

ತಿರುವನಂತಪುರಂ: ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರನೇ ವಿದ್ಯಾರ್ಥಿಯಲ್ಲಿ ಈ ಸೋಂಕು ಪತ್ತೆಯಾದ ಬೆನ್ನಲ್ಲೇ ರಾಜ್ಯ ವಿಪತ್ತು ಎಂದು ಸರ್ಕಾರ ಘೋಷಣೆ ಮಾಡಿದೆ

ಕೊರೋನಾ ವೈರಸ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರಾಜ್ಯ ವಿಪತ್ತು ಎಂದು ಘೋಷಿಸುವುದರೊಂದಿಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಆರೋಗ್ಯ ಸಚಿವೆ ಕೆಕೆ ಶೈಲಜಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೇರಳದಲ್ಲಿ ಕೊರೋನಾ ವೈರಸ್ ಸೋಂಕಿತರ ಮೂರನೇ ಪ್ರಕರಣ ಕಂಡುಬಂದ ಕೆಲ ಗಂಟೆಗಳಲ್ಲೇ 
ಮುಖ್ಯ ಕಾರ್ಯದರ್ಶಿ ಟಾಮ್ ಜೋಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಮೂವರು ವಿದ್ಯಾರ್ಥಿಗಳಲ್ಲಿಯೂ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ ಹೇಳಲಾಗಿದೆ. ಇದಕ್ಕೂ ಮುನ್ನ ಚೀನಾದ ವುಹಾನ್ ನಿಂದ ಬಂದಿದ್ದ ತ್ರಿಶೂರ್ ಮತ್ತು ಅಲಾಫುಝಾದ ಇಬ್ಬರು ವಿದ್ಯಾರ್ಥಿಗಳಲ್ಲಿ ಕೊರೋನಾ ವೈರಾಣು ಪತ್ತೆಯಾಗಿತ್ತು.

ಕೊರೋನಾ ವೈರಸ್ ಪೀಡಿತ ಚೀನಾದಿಂದ ಈವರೆಗೂ 2239 ಜನರು ಬಂದಿದ್ದು, ಅವರ ಮೇಲೆ ನಿಗಾ ಇಡಲಾಗಿದೆ. ಈ ಪೈಕಿ 2155 ಮಂದಿಯನ್ನು ಮನೆಯಿಂದ ಪ್ರತ್ಯೇಕಿಸಿ ನಿಗಾ ವಹಿಸಲಾಗಿದೆ. 84 ಮಂದಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಕೇರಳ ಸರ್ಕಾರ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com