ಅರವಿಂದ್ ಕೇಜ್ರಿವಾಲ್ ಓರ್ವ ಭಯೋತ್ಪಾದಕ ಎಂದು ಸಾಬೀತುಪಡಿಸಲು ಸಾಕಷ್ಟು ಆಧಾರಗಳಿವೆ: ಜಾವಡೇಕರ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಓರ್ವ ಭಯೋತ್ಪಾದಕ ಎಂದು ಸಾಬೀತುಪಡಿಸಲು ಸಾಕಷ್ಟು ಆಧಾರಗಳಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಕಿಡಿಕಾರಿದ್ದಾರೆ.
ಪ್ರಕಾಶ್ ಜಾವಡೇಕರ್-ಅರವಿಂದ್ ಕೇಜ್ರಿವಾಲ್
ಪ್ರಕಾಶ್ ಜಾವಡೇಕರ್-ಅರವಿಂದ್ ಕೇಜ್ರಿವಾಲ್
Updated on: 

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಓರ್ವ ಭಯೋತ್ಪಾದಕ ಎಂದು ಸಾಬೀತುಪಡಿಸಲು ಸಾಕಷ್ಟು ಆಧಾರಗಳಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಕಿಡಿಕಾರಿದ್ದಾರೆ. 

ಕೇಜ್ರಿವಾಲ್ ಮುಗ್ಧರಂತೆ ನಾಟಕವಾಡುತ್ತಿದ್ದಾರೆ. ತಮ್ಮನ್ನು ತಾವು ಅರಾಜಕತವಾದಿ ಎಂದು ಹಲವು ಬಾರಿ ಕರೆದುಕೊಂಡಿದ್ದರು. ಅರಾಜಕತೆ ಪ್ರತಿಪಾದಕರಿಗೂ ಭಯೋತ್ಪಾದಕರಿಗೂ ವ್ಯತ್ಯಾಸ ಏನಿದೆ? ಎಂದು ಪ್ರಕಾಶ್ ಜಾವಡೇಕರ್ ಪ್ರಶ್ನಿಸಿದ್ದಾರೆ. 

ಎಎಪಿ ಚುನಾವಣಾ ಆಯೋಗಕ್ಕೆ ದೆಹಲಿಯ ಚುನಾವಣಾ ಪ್ರಚಾರದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಾಲ್ಗೊಳ್ಳುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದು ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಎಎಪಿ ವಿರುದ್ಧ ಹರಿಹಾಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com