ಬೆಳಗಾವಿ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ: ಉದ್ಧಟತನ ಪ್ರದರ್ಶಿಸಿದ ಉದ್ಧವ್

ಬೆಳಗಾವಿಯನ್ನು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಎಂದು ಕರೆಯುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖಂಡ ಉದ್ಧಟತನ ಪ್ರದರ್ಶಿಸಿದ್ದಾರೆ. 
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಬೆಳಗಾವಿಯನ್ನು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಎಂದು ಕರೆಯುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖಂಡ ಉದ್ಧಟತನ ಪ್ರದರ್ಶಿಸಿದ್ದಾರೆ. 

ಶಿವಸೇನೆ ಮುಖವಾಣಿ ಸಾಮ್ನಾಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆಯವರು, ಕನ್ನಡಿಗರ ಭಾವನೆ ಕೆರಳಿಸುವ ಮನೋಭಾವ ಮುಂದುವರೆಸಿದ್ದಾರೆ. 

ಸಂದರ್ಶದನಲ್ಲಿ ಬೆಳಗಾವಿ ಗಡಿ ವಿವಾದ ಕುರಿತು ಮಾತನಾಡಿರುವ ಉದ್ಧವ್. ನಮ್ಮ ಸರ್ಕಾರ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರದ ವಿವಾದ ಬಗೆಹರಿಸಲಿದೆ ಎಂದು ಹೇಳಿದ್ದಾರೆ. 

ಮಹಾರಾಷ್ಟ್ರವು ಕರ್ನಾಟಕದ ಮರಾಠಿ ಭಾಷಿಕ ಪ್ರದೇಶಗಳು ತನ್ನಲ್ಲಿ ವಿಲೀನ ಆಗಬೇಕು ಎಂದು ಬಯಸುತ್ತದೆ. ಈ ವಿಷಯ ನ್ಯಾಯಾಲಯದಲ್ಲಿದೆ. ಆದರೆ, ಈ ವಿಚಾರದಲ್ಲಿ ತಟಸ್ಥ ಧೋರಣೆ ತಾಳುವುದನ್ನು ಬಿಟ್ಟು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 

ಕಳೆದ ಡಿಸಂಬರ್ ತಿಂಗಳಿನಲ್ಲಿ ಕೂಡ ಬೆಳಗಾವಿಯನ್ನು ಉಧ್ಧವ್ ಕರ್ನಾಟಕ ಆಕ್ರಮಿತ ಕಾಶ್ಮೀರ ಎಂದು ಕರೆದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದರು. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪದಬಳಕೆಯಿಂದ ಸೂರ್ತಿ ಪಡೆದು ಅವರು ಈ ಮಾತನ್ನು ಆಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com