ನಿರ್ಭಯಾ ಅಪರಾಧಿಗಳಿಗೆ ಗಲ್ಲು: ದೆಹಲಿ ಹೈಕೋರ್ಟ್ ತಿರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ, ದೆಹಲಿ ಸರ್ಕಾರ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.
ನಿರ್ಭಯಾ ಅಪರಾಧಿಗಳು
ನಿರ್ಭಯಾ ಅಪರಾಧಿಗಳು
Updated on

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಗಲ್ಲುಶಿಕ್ಷೆಯನ್ನು ತಡೆಹಿಡಿದ ದೆಹಲಿ ಪಟಿಯಾಲ ಹೌಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಜಾಗೊಳಿಸಿದ ದೆಹಲಿ ಹೈಕೋರ್ಟ್, ನಾಲ್ವರು ಅಪರಾಧಿಗಳನ್ನೂ ಒಟ್ಟಿಗೇ ಗಲ್ಲಿಗೇರಿಸಬೇಕು. ಬೇರೆಬೇರೆಯಾಗಿ ನೇಣಿಗೆ ಹಾಕುವಂತಿಲ್ಲ ಎಂದು ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪು ನೀಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿವೆ.

ನಿರ್ಭಯಾ ಅಪರಾಧಿಗಳು ಯಾವುದೇ ಕಾನೂನು ಪ್ರಕ್ರಿಯೆ ಕೈಗೊಳ್ಳುವುದಿದ್ದರೂ, ಅರ್ಜಿ ಸಲ್ಲಿಸುವುದಿದ್ದರೂ ಇನ್ನೊಂದು ವಾರದಲ್ಲಿ ಅದನ್ನೆಲ್ಲ ಪೂರ್ತಿಗೊಳಿಸಿಕೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಅಪರಾಧಿಗಳಾದ ಮುಕೇಶ್ ಕುಮಾರ್​ ಸಿಂಗ್​, ಪವನ್​ ಗುಪ್ತಾ, ವಿನಯ್​ ಕುಮಾರ್​ ಶರ್ಮಾ, ಅಕ್ಷಯ್​ ಕುಮಾರ್​ರನ್ನು ಫೆ.1ರಂದು ನೇಣಿಗೆ ಏರಿಸಬೇಕಿತ್ತು. ಆದರೆ ಈ ಮಧ್ಯೆ ಕೆಲವು ಕಾನೂನು ಪ್ರಕ್ರಿಯೆಗಳಿಂದಾಗಿ ದೆಹಲಿ ನ್ಯಾಯಾಲಯ ಅವರ ಮರಣದಂಡನೆಗೆ ತಡೆ ನೀಡಿತ್ತು. ಅದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು. ಫೆ.2ರಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಸುರೇಶ್​ ಕುಮಾರ್ ಕೈಟ್​ ತೀರ್ಪು ಕಾಯ್ದಿರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com