ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಸಮಿತಿ ರಚನೆ: ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕುರಿತು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಮಹತ್ವದ ನಿರ್ಣಯವೊಂದನ್ನು ಕೈಗೊಂಡಿದೆ. ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತಿಳಿಸಿದ್ದಾರೆ. 
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಸಮಿತಿ ರಚನೆ: ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಸಮಿತಿ ರಚನೆ: ಪ್ರಧಾನಿ ಮೋದಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕುರಿತು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಮಹತ್ವದ ನಿರ್ಣಯವೊಂದನ್ನು ಕೈಗೊಂಡಿದೆ. ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತಿಳಿಸಿದ್ದಾರೆ. 

ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿರುವ ಮೋದಿಯವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಯೋಜನೆಯೊಂದನ್ನು ಹಮ್ಮಿಕೊಳ್ಳಲಾಗಿದ್ದು, ಮಂದಿರ ನಿರ್ಮಾಣಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಸಮಿತಿಯೊಂದನ್ನು ರಚನೆ ಮಾಡಲಾಗುತ್ತದೆ. ಟ್ರಸ್ಟ್ ರಚನೆ ಕುರಿತು ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಸಮಿತಿ ರಚನೆಗೊಂಡ ಬಳಿಕ ಭೂಮಿಯನ್ನು ಟ್ರಸ್ಟ್'ಗೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಸಭೆಯ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದೂ ಪ್ರಧಾನಮಂತ್ರಿಗಳು ವಿನಂತಿಸಿಕೊಂಡಿದ್ದಾರೆ. 

ಸುಪ್ರೀಂಕೋರ್ಟ್ ತೀರ್ಪಿನಂತೆ ಸುನ್ನಿ ವಕ್ಫ್ ಮಂಡಳಿಗೆ 5 ಎಕರೆ ಭೂಮಿಯನ್ನು ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಕೊಂಡಿದೆ. ಭಾರತದಲ್ಲಿ ಹಿಂದು, ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಬೌದ್ಧರು, ಪಾರ್ಸಿಗಳು ಹಾಗೂ ಜೈನ್ ಹೀಗೆ ಎಲ್ಲರೂ ಒಂದೇ ಕುಟುಂಬದ ಸದಸ್ಯರು ಇದೇ ವೇಳೆ ಮೋದಿಯವರು ಒತ್ತಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com