ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಮರುಕಳಿಸಲು ಬಿಡುವುದಿಲ್ಲ: ಪ್ರಧಾನಿ ಮೋದಿ 

ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಮರುಕಳಿಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. 
ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಮರುಕಳಿಸಲು ಬಿಡುವುದಿಲ್ಲ: ಪ್ರಧಾನಿ ಮೋದಿ
ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಮರುಕಳಿಸಲು ಬಿಡುವುದಿಲ್ಲ: ಪ್ರಧಾನಿ ಮೋದಿ
Updated on

ಅಸ್ಸಾಂ: ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಮರುಕಳಿಸಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. 

ಫೆ.07 ರಂದು ಅಸ್ಸಾಂ ನಲ್ಲಿ ಬೋಡೋ ಶಾಂತಿ ಒಪ್ಪಂದದ ಸಂಭ್ರಮಾಚರಣೆಯ ಭಾಗವಾಗಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ "ಜನರ ಬೆಂಬಲದಿಂದ ಅಸ್ಸಾಂ ನಲ್ಲಿ ಶಾಂತಿ ನೆಲೆಸಲು ಸಾಧ್ಯವಾಗಿದೆ. ಈಶಾನ್ಯ ರಾಜ್ಯಗಳ ಅಭಿವೃದ್ಧಿ ಹಾಗೂ ಶಾಂತಿಗಾಗಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ, ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಮರುಕಳಿಸಲು ಬಿಡುವುದಿಲ್ಲ ಎಂದು ಮೋದಿ ಭರವಸೆ ನೀಡಿದ್ದಾರೆ. 

1993 ಹಾಗೂ 2003 ರಲ್ಲಿ ಬಿಟಿಎಡಿ (Bodoland Territorial autonomous region) ಯಲ್ಲಿ ಶಾಂತಿ ಸ್ಥಾಪನೆಗೆ ಸಹಕಾರಿಯಾಗಲಿಲ್ಲ. ಬೋಡೋ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಯಾವುದೇ ಬೇಡಿಕೆಗಳು ಇನ್ನು ಉಳಿದಿಲ್ಲ. ಅಸ್ಸಾಂ ಅಕಾರ್ಡ್ ನ ಕ್ಲಾಸ್ 6 ನ್ನು ಜಾರಿಗೊಳಿಸಬೇಕಿದೆ. ವರದಿ ಬಂದ ಬೆನ್ನಲ್ಲೆ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ವೇಗವಾಗಿ ಕಾರ್ಯನಿರ್ವಹಿಸಲಿದೆ. ಬೋಡೋ ಲ್ಯಾಂಡ್ ಚಳುವಳಿಯನ್ನು ಬಿಟ್ಟು ಮುನ್ನೆಲೆಗೆ ಬಂದಿರುವವರನ್ನು ಸ್ವಾಗತಿಸುತ್ತೇವೆ, ಬೋಡೋ ಲ್ಯಾಂಡ್ ಚಳುವಳಿಯಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರ ಆಶೋತ್ತರಗಳನ್ನೂ ಗೌರವಿಸಲಾಗಿದೆ,  ಎಂದು ಮೋದಿ ಸಮಾವೇಶದಲ್ಲಿ ಹೇಳಿದ್ದಾರೆ. 

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಡಿಗೆ ಹೇಳಿಕೆಯನ್ನೂ ಪ್ರಸ್ತಾಪಿಸಿರುವ ಪ್ರಧಾನಿ, ದೇಶದಲ್ಲಿರುವ ತಾಯಂದಿರು ಹಾಗೂ ಸಹೋದರಿಯರಿಯರ ರಕ್ಷಾ ಕವಚ ತಮ್ಮ ಮೇಲಿದ್ದು, ಯಾವುದೇ ದಾಳಿಯಿಂದಲೂ ನೋವಾಗುವುದಿಲ್ಲ ಎಂದು ಹೇಳಿದ್ದಾರೆ.  ಈಶಾನ್ಯ ರಾಜ್ಯಗಳ ಸಮಸ್ಯೆಗಳಿಗೆ ಯಾರೂ ಸ್ಪಂದಿಸಿರಲಿಲ್ಲ. ಗೊಂದಲಗಳು ಮುಂದುವರೆಯುವುದಕ್ಕೆ ಅವಕಾಶ ನೀಡಿದ್ದರು. ಈ ನಡೆಯಿಂದ ಜನರು ಬೇಸತ್ತು ಸಂವಿಧಾನದಲ್ಲಿ ನಂಬಿಕೆ ಕಳೆದುಕೊಂಡಿದ್ದರು. ದೀರ್ಘಾವಧಿಯಿಂದ ಈಶಾನ್ಯ ರಾಜ್ಯಗಳಲ್ಲಿ ಸಶಸ್ತ್ರ ಸೇನಾ ಪಡೆಗಳ ವಿಶೇಷಾಧಿಕಾರ ಕಾಯ್ದೆ ಜಾರಿಯಲ್ಲಿತ್ತು.  ಈಗ ತ್ರಿಪುರಾ ಹಾಗೂ ಹಲವು ಭಾಗಗಳಲ್ಲಿ ವಿಶೇಷಾಧಿಕಾರ ಕಾಯ್ದೆಯನ್ನು ತೆಗೆದುಹಾಕಲಾಗಿದೆ ಎಂದು ಮೋದಿ ಕಾಂಗ್ರೆಸ್ ನ್ನು ಗುರಿಯಾಗಿರಿಸಿಕೊಂಡು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com