'ಒಂದು ದೇಶ, ಒಂದು ಪಡಿತರ ಚೀಟಿ’ ಜೂನ್ 1 ರಿಂದ ದೇಶಾದ್ಯಂತ ಜಾರಿ: ಪಾಸ್ವಾನ್

ಒಂದು ದೇಶ, ಒಂದು ಪಡಿತರ ಚೀಟಿ’ ಯೋಜನೆ ಜೂನ್ 1 ರಿಂದ ದೇಶದಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಘೋಷಿಸಿದರು.
ರಾಮ್ ವಿಲಾಸ್ ಪಾಸ್ವಾನ್
ರಾಮ್ ವಿಲಾಸ್ ಪಾಸ್ವಾನ್
Updated on

ನವದೆಹಲಿ: ಒಂದು ದೇಶ, ಒಂದು ಪಡಿತರ ಚೀಟಿ’ ಯೋಜನೆ ಜೂನ್ 1 ರಿಂದ ದೇಶದಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಘೋಷಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಒಂದೇ ಪಡಿತರ ಚೀಟಿ ಬಳಸಿ ದೇಶದ ಯಾವುದೇ ಭಾಗದಲ್ಲಿ ಫಲಾನುಭವಿಗಳು  ಸಬ್ಸಿಡಿ ದರದಲ್ಲಿ ರೇಷನ್ ಪಡೆಯಬಹುದಾಗಿದೆ ಎಂದು ಹೇಳಿದರು. 
ಈಗಾಗಲೇ ಆಂಧ್ರ ಪ್ರದೇಶ,ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಕೇರಳ, ಕರ್ನಾಟಕ, ಹರ್ಯಾಣ, ತ್ರಿಪುರ ಮತ್ತು ಗೋವಾ, ಜಾರ್ಖಂಡ್ ಮಧ್ಯಪ್ರದೇಶ ಸೇರಿದಂತೆ 12 ರಾಜ್ಯಗಳಲ್ಲಿ ಜನವರಿ 1ರಿಂದಲೇ ಯೋಜನೆ ಜಾರಿಯಾಗಿದೆ. 

ಈ ಯೋಜನೆಗಾಗಿ ಹೊಸ ಪಡಿತರ ಚೀಟಿಗಳನ್ನು ಪಡೆಯುವ ಅಗತ್ಯವಿಲ್ಲ ಮತ್ತು ಈ ವಿಷಯದಲ್ಲಿ ಹರಡಿದ ವದಂತಿಗಳನ್ನು ಹರಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com