ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇಲ್ಲ ಎನ್ನುವುದಕ್ಕೆ ಜನ ಬಟ್ಟೆ ಹಾಕಿಕೊಳ್ಳುತ್ತಿರುವುದೇ ಸಾಕ್ಷಿ! ಬಿಜೆಪಿ ಸಂಸದ

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇಲ್ಲ ಎನ್ನುವುದಕ್ಕೆ ಜನ ಬಟ್ಟೆ ಹಾಕಿಕೊಳ್ಳುತ್ತಿರುವುದೇ ಸಾಕ್ಷಿ ಎಂದು ಬಿಜೆಪಿ ಸಂಸದರೊಬ್ಬರು ಸೋಮವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬಲ್ಲಿಯಾ: ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇಲ್ಲ ಎನ್ನುವುದಕ್ಕೆ ಜನ ಬಟ್ಟೆ ಹಾಕಿಕೊಳ್ಳುತ್ತಿರುವುದೇ ಸಾಕ್ಷಿ ಎಂದು ಬಿಜೆಪಿ ಸಂಸದರೊಬ್ಬರು ಸೋಮವಾರ ಹೇಳಿದ್ದಾರೆ.

ದೇಶದಲ್ಲಿ ಯಾವುದೇ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿಲ್ಲ. ಜನ ಧೋತಿ, ಕುರ್ತಾ ಧರಿಸುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಸಂಸದ ವೀರೇಂದ್ರ ಸಿಂಗ್​​ ಮಸ್ತ್ ಅವರು ಹೇಳಿದ್ದಾರೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ಸಂಸದ, ವಿಶ್ವದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರಬಹುದು. ಆದರೆ ಅದರ ಪರಿಣಾಮ ಭಾರತದ ಮೇಲೆ ಬೀರುವುದಿಲ್ಲ. ಏಕೆಂದರೆ ಭಾರತದ ಗ್ರಾಮೀಣ ಪ್ರದೇಶದ ಮತ್ತು ಕೃಷಿ ಆರ್ಥಿಕತೆ ಭದ್ರವಾಗಿದೆ ಎಂದಿದ್ದಾರೆ.

ಒಂದು ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದರೆ ನಾವು ಯಾರೂ ಧೋತಿ, ಕುರ್ತಾ, ಕೋಟ್, ಜಾಕೇಟ್ ಮತ್ತು ಪ್ಯಾಂಟ್ ಗಳನ್ನು ಧರಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಭಾರತ ಹಳ್ಳಿಗಳ ದೇಶ. ಇಲ್ಲಿ ಕೇವಲ ದೆಹಲಿ, ಮುಂಬೈ ಮತ್ತು ಚೆನ್ನೈನಂತಹ ಮೆಟ್ರೋ ನಗರಗಳು ಮಾತ್ರ ಇಲ್ಲ. ಬ್ಯಾಂಕಿಂಗ್ ವರದಿಗಳ ಪ್ರಕಾರ, ಗ್ರಾಮೀಣ ಪ್ರದೇಶದ ಜನರೇ ಬ್ಯಾಂಕ್ ಗಳಲ್ಲಿ ಹೆಚ್ಚು ಹಣ ಠೇವಣಿ ಮಾಡಿರುತ್ತಾರೆ ಎಂದು ವೀರೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com